ಶಾಲೆ ಪ್ರಾರಂಭಿಸುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ: ಸಚಿವ ಸುರೇಶ್ ಕುಮಾರ್
ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ರಾಜ್ಯದ ಶಾಲಾ ಮಕ್ಕಳ ಪೋಷಕರು ಯಾವುದೇ ಸುದ್ದಿಗಳನ್ನು ತಿಳಿದು ಆತಂಕ ಪಡುವ ಅಗತ್ಯವಿಲ್ಲ. ತರಾತುರಿಯಲ್ಲಿ ನಮ್ಮ ರಾಜ್ಯದ ಶಾಲೆಗಳನ್ನು ತೆರೆಯುವುದಿಲ್ಲ. ಮಕ್ಕಳ ಹಿತ ಕಾಪಾಡುವ ಜವಾಬ್ದಾರಿ ನಮ್ಮದು. ಮಾಧ್ಯಮಗಳಲ್ಲಿ ಬರುತ್ತಿರುವ ಕೆಲ ಮಾಹಿತಿಗಳು ಅಧಿಕೃತವಲ್ಲ ಎಂದು ಅವರು ತಿಳಿಸಿದ್ದಾರೆ.