ಸಚಿವ ಭೈರತಿ ಸುರೇಶ್: ರಾಜ್ಯಾದ್ಯಂತ ಹೊಸದಾಗಿ 188 ಇಂದಿರಾ ಕ್ಯಾಂಟೀನ್ ಆರಂಭ

ಬೆಳಗಾವಿ : ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ರಾಜ್ಯಾದ್ಯಂತ ಹೊಸದಾಗಿ 188 ಇಂದಿರಾ ಕ್ಯಾಂಟೀನ್ ತೆರೆಯಲಿದ್ದೇವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್​ ತಿಳಿಸಿದ್ದಾರೆ. ‘ರಾಜ್ಯದಲ್ಲಿ ಮತ್ತಷ್ಟು ಇಂದಿರಾ ಕ್ಯಾಂಟೀನ್ ಆರಂಭ’ ಸಚಿವ ಭೈರತಿ ಸುರೇಶ್ ಅವರು ಶುಕ್ರವಾರ ಬೆಳಗಾವಿಯಲ್ಲಿ ಇಂದಿರಾ ಕ್ಯಾಂಟೀನ್​ಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಇಂದಿರಾ ಕ್ಯಾಂಟೀನ್​ ತುಂಬಾ ಸಂಕಷ್ಟದಲ್ಲಿವೆ ಎಂಬ ಪ್ರಶ್ನೆಗೆ, “ಹಿಂದಿನ ಬಿಜೆಪಿ ಸರ್ಕಾರ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷಿ ಯೋಜನೆಗೆ ಕೆಟ್ಟ ಹೆಸರು ತರಲು ಸರಿಯಾಗಿ ನಿರ್ವಹಣೆ ಮಾಡದೇ ಕ್ಯಾಂಟೀನ್​ಗಳನ್ನು […]