ಉಪಗ್ರಹದ ಮೂಲಕ ಮೀನುಗಾರರ ಹುಡುಕಾಟ :ಸಚಿವ ವೆಂಕಟರಾವ್ ನಾಡಗೌಡ
ಉಡುಪಿ: ಕಳೆದ 25 ದಿನಗಳಿಂದ ನಾಪತ್ತೆಯಾಗಿರುವ ತ್ರಿಭುಜ ಭೋಟ್ ಮಾಲೀಕ ಚಂದ್ರಶೇಖರ್ ಕೋಟ್ಯಾನ್ ಹಾಗೂ ತಾಂಡೇಲ ದಾಮೋದರ ಸಾಲಿಯಾನ್ ಅವರ ಬಡಾನಿಡಿಯೂರು ಗ್ರಾಮದ ಪಾವಂಜಿಗುಡ್ಡೆ ಮನೆಗಳಿಗೆ ಬುಧವಾರ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಬೋಟ್ ಹಾಗೂ ಏಳು ಮಂದಿ ಮೀನುಗಾರರಿಗೆ ಸಂಬಂಧಿಸಿ ಮಹಾರಾಷ್ಟ್ರ, ಗೋವಾ ರಾಜ್ಯಗಳಲ್ಲಿ ಪೊಲೀಸರು ಮಾತ್ರವಲ್ಲದೆ ಕೋಸ್ಟ್ ಗಾರ್ಡ್, ನೌಕಪಡೆ […]