ಸಿಬ್ಬಂದಿಗಳಿಗೆ ಉತ್ತಮ ಸೇವೆಗಾಗಿ ಗಾಂಧಿ ಆಸ್ಪತ್ರೆಗೆ ಇಪಿಎಫ್‌ಒ ಪ್ರಶಂಸಾ ಪ್ರಮಾಣ ಪತ್ರ

ಉಡುಪಿ: ಸಿಬ್ಬಂದಿಗಳಿಗೆ ಉತ್ತಮ ಸೇವೆಯನ್ನು ಒದಗಿಸಿದ ಕೊಡುಗೆಗಾಗಿ ಗಾಂಧಿ ಆಸ್ಪತ್ರೆಗೆ ಇಪಿಎಫ್‌ಒ ಪ್ರಶಂಸಾ ಪ್ರಮಾಣಪತ್ರವನ್ನು ನ.2 ರಂದು ಇಪಿಎಫ್‌ಒ ​​ನ 70 ನೇ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ನೀಡಲಾಯಿತು. ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವ್ಯಾಸರಾಜ ತಂತ್ರಿ ಎ. ಅವರು ಪ್ರಾದೇಶಿಕ ಪಿಎಫ್ ಆಯುಕ್ತ ಅಭಿಷೇಕ್ ರಂಜನ್ ಅವರಿಂದ ಪ್ರಮಾಣಪತ್ರವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಎಂ. ಕೂರ್ಮಾ ರಾವ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ ಉಪಸ್ಥಿತರಿದ್ದರು.