ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ನಾಪತ್ತೆ

ಉಡುಪಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಶಿವಕುಮಾರ್ (35) ಎಂಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ನಗರದ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಡಿಸೆಂಬರ್ 11 ರಂದು ಆಸ್ಪತ್ರೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಬಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ