ಹಿರಿಯಡ್ಕ: ಬೆಂಗಳೂರಿಗೆ ತೆರಳಿದ ವ್ಯಕ್ತಿ ನಾಪತ್ತೆ

ಹಿರಿಯಡ್ಕ: ಹಿರಿಯಡ್ಕ ನಿವಾಸಿ ರವೀಂದ್ರ ಶೆಟ್ಟಿ (55) ಎಂಬ ವ್ಯಕ್ತಿಯು ಅಕ್ಟೋಬರ್ 14 ರಂದು ರಾತ್ರಿ 10.30 ರ ಸುಮಾರಿಗೆ ಮನೆಯಿಂದ ಬೆಂಗಳೂರಿಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 8 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು, ಹಿಂದಿ, ಇಂಗ್ಲೀಷ್ ಹಾಗೂ ತಮಿಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಶಿರ್ವ: ಯುವತಿ ನಾಪತ್ತೆ

ಶಿರ್ವ: ಇಲ್ಲಿನ ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ವಿನಿತಾ(22) ಅ.9 ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಅಕ್ಕನಲ್ಲಿ ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿದ್ದು, ತನ್ನ ಮನೆಗೆ ವಾಪಾಸು ಬಾರದೆ ಕಾಣೆಯಾಗಿದ್ದಾರೆ. ಬಿ.ಕಾಂ ಪದವೀಧರೆಯಾಗಿರುವ ಈಕೆ ಉಡುಪಿಯ ಎಂಜಿಎಂ ಕಾಲೇಜಿನ ಸಮೀಪ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಕಳೆದ ನಾಲ್ಕು ತಿಂಗಳಿಂದ ಉದ್ಯೋಗದಲ್ಲಿದ್ದು, ವಾರದ ಹಿಂದೆ ಉದ್ಯೋಗ ತ್ಯಜಿಸಿದ್ದರು ಎನ್ನಲಾಗಿದೆ. ಆಕೆ ಉಪಯೋಗಿಸುತ್ತಿದ್ದ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸ್ನೇಹಿತರಿಗೂ ಸಂಬಂಧಿಕರಿಗೂ ಯಾವುದೇ ಮಾಹಿತಿ ಇಲ್ಲ. ಆಕೆಯ ಹುಡುಕಾಟಕ್ಕೆ ನಡೆಸಿದ […]

ಉಡುಪಿ: ಯುವತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು 76-ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆ ಶಂಕರಶೆಟ್ಟಿ ಕಂಪೌಂಡ್‌ನ ಬಾಡಿಗೆ ಮನೆಯ ನಿವಾಸಿ ಜಯಶ್ರೀ ರಾಠೋಡ್ ಅಲಿಯಾಸ್ ಪೂಜಾ ಎಂಬ ಯುವತಿಯು ಅಕ್ಟೋಬರ್ 1 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಲಂಬಾಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕುಂದಾಪುರ: ವ್ಯಕ್ತಿ ನಾಪತ್ತೆ

ಕುಂದಾಪುರ: ಕುಂದಾಪುರ ತಾಲೂಕು ವಂಡ್ಸೆ ಗ್ರಾಮದ ನಿವಾಸಿ ಅಣ್ಣಪ್ಪ (30) ಎಂಬ ವ್ಯಕ್ತಿಯು ಸೆಪ್ಟಂಬರ್ 28 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ, ಸದೃಢ ಶರೀರ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ: 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434 […]

ಉಡುಪಿ: ವ್ಯಕ್ತಿಗಳು ನಾಪತ್ತೆ

ಉಡುಪಿ: ಬ್ರಹ್ಮಾವರ ತಾಲೂಕು ಹನೇಹಳ್ಳಿ ಗ್ರಾಮದ ಮಾಸ್ತಿನಗರ ನಿವಾಸಿ ಶಂಕರ ಸುವರ್ಣ (65) ಎಂಬ ವ್ಯಕ್ತಿಯು 2020 ರ ನವೆಂಬರ್ 10 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820- 2526444, ಬ್ರಹ್ಮಾವರ ಪೊಲೀಸ್ ವೃತ್ತ […]