ಬ್ರಹ್ಮಾವರ: ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಬಂದಿದ್ದ ತಾಯಿ-ಮಗು ನಾಪತ್ತೆ

ಉಡುಪಿ: ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಬ್ರಹ್ಮಾವರ ತಾಲೂಕು ಹೇರೂರು ಗ್ರಾಮದಲ್ಲಿರುವ ಚಿಕ್ಕಪ್ಪನ ಮನೆಗೆ ಬಂದಿದ್ದ ಮಂಗಳೂರಿನ ಉಳ್ಳಾಲ ಬಂಡಿಕೊಟ್ಯ ನಿವಾಸಿ ಪ್ರಥ್ವಿನಿ (32) ಎಂಬ ಮಹಿಳೆಯು ತನ್ನ ನಾಲ್ಕೂವರೆ ವರ್ಷದ ಮಗಳಾದ ಪುನರ್ವಿಯೊಂದಿಗೆ ಮೇ 13 ರಿಂದ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ದಪ್ಪ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0820-2561044, […]

ಉಡುಪಿಯ ಯುವತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆ ನಿವಾಸಿ ಭಾರತಿ ಲಮಾಣಿ (19) ಎಂಬ ಯುವತಿಯು ಮೇ 8 ರಂದು ಮಧ್ಯಾಹ್ನ 3.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಲಂಬಾಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಅಸ್ಥಿಪಂಜರವಾಗಿ ಪತ್ತೆಯಾದ 9 ತಿಂಗಳ ಹಿಂದೆ ನಾಪತ್ತೆಯಾದವ! ಸಾವಿನ ಸುತ್ತ ಸಂಶಯದ ಹುತ್ತ?

ಪೆರ್ಡೂರು: 9 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಪೆರ್ಡೂರು ಗ್ರಾಮದ ಪಕ್ಕಾಲು ಜಯಲಕ್ಷ್ಮೀ ಮನೆ ನಿವಾಸಿ 30 ವರ್ಷದ ನಾಗರಾಜ ಆಚಾರ್ಯ ಎಂಬವರ ಮೃತದೇಹವು ಅಸ್ಥಿಪಂಜರದ ಸ್ಥಿತಿಯಲ್ಲಿ‌ ಮನೆಯ ಸಮೀಪದ ಚೌಂಡಿ ನಗರದ ಕೇಶವ ಹೆಗ್ಡೆ ಅವರ ಹಾಡಿಯಲ್ಲಿ ಮೇ.7ರಂದು ಸಂಜೆ ಪತ್ತೆಯಾಗಿದೆ. ನಾಗರಾಜ ಆಚಾರ್ಯ 2021ರ ಆಗಸ್ಟ್ 11ರ ಬೆಳಿಗ್ಗೆ 8.30ರಿಂದ ಮನೆಯಿಂದ ಕಾಣೆಯಾಗಿದ್ದರು. ಮನೆಯವರು ಸಾಕಷ್ಟು ಹುಡುಕಾಡಿದರೂ ನಾಗರಾಜ ಪತ್ತೆಯಾಗಿರಲಿಲ್ಲ. ಈ ಬಗ್ಗೆ ಹಿರಿಯಡಕ ಠಾಣೆಯಲ್ಲಿ ನಾಪತ್ತೆ ಪ್ರಕರಣ ಕೂಡ ದಾಖಲಾಗಿತ್ತು. ನಿನ್ನೆ ಸಂಜೆ ಮೃತನ ಸಹೋದರ […]

ಯುವತಿ ನಾಪತ್ತೆ

ಉಡುಪಿ: ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಹೆಗ್ಡೆಹಕ್ಲು ನಿವಾಸಿ ಸುನೀತಾ (22) ಎಂಬ ಯುವತಿಯು ಏಪ್ರಿಲ್ 20 ರಂದು ಬೆಳಗ್ಗೆ 11.30 ರ ಸುಮಾರಿಗೆ ಕೆಲಸಕ್ಕೆಂದು ತೆರಳಿದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತೆಲುಗು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254- 258233, ಮೊ.ನಂ. 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ […]