ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನಾಪತ್ತೆ

ಉಡುಪಿ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಬೇಳಂಜೆ ಗ್ರಾಮದ ಬೂತಗುಂಡಿ ನಿವಾಸಿ ವಿಜೇಶ (42) ಎಂಬ ವ್ಯಕ್ತಿಯು ಜೂನ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 163 ಸೆಂ.ಮೀ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ. ಸಂಖ್ಯೆ: 08253-251116, ಮೊ.ನಂ: 9480805463 ಹಾಗೂ ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08258-231083, […]

ಬಂಟ್ವಾಳ: ಬೆಂಗಳೂರಿಗೆ ಹೋದ ಯುವತಿ ನಾಪತ್ತೆ

ಬಂಟ್ವಾಳ: ಬೆಂಗಳೂರಿಗೆ ಹೋಗುವುದಾಗಿ ಸಂದೇಶ ಕಳುಹಿಸಿ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಕಸ್ಬಾ ಗ್ರಾಮದ ಲೆಕ್ಕಸಿರಿ ಪಾದೆ ನಿವಾಸಿ ರಮೇಶ್ ಸಾಲಿಯಾನ್ ಎಂಬವರ ಪುತ್ರಿ ನೇಹಾ (22) ನಾಪತ್ತೆಯಾದ ಯುವತಿ. ಮಂಗಳೂರಿನ ಸುರಕ್ಷತಾ ಸಲಕರಣೆ ಅಂಗಡಿಯೊಂದರಲ್ಲಿ ಉದ್ಯೋಗಿಯಾಗಿದ್ದ ನೇಹಾ, ತನಗೆ ಮದುವೆಯ ಪ್ರಸ್ತಾಪವನ್ನು ನೋಡುತ್ತಿದ್ದ ಮನೆಯವರಲ್ಲಿ ತಾನು ಸದ್ಯಕ್ಕೆ ಮದುವೆಯಾಗುವುದಿಲ್ಲ, ತನಗಿನ್ನೂ ಹೆಚ್ಚು ಓದುವ ಆಸೆ ಇದೆ ಎಂದು ತಿಳಿಸಿದ್ದಳು. ಮೇ 27ರಂದು ನೇಹಾ ಎಂದಿನಂತೆ ಕೆಲಸಕ್ಕೆ ಹೋಗಿದ್ದು, ಸಂಜೆ 4 ಗಂಟೆಗೆ ಚಿಕ್ಕಮ್ಮನ ಮೊಬೈಲ್‌ಗೆ ತಾನು […]

ಬ್ರಹ್ಮಾವರ: ಮಹಿಳೆ ನಾಪತ್ತೆ

ಬ್ರಹ್ಮಾವರ: ತಾಲೂಕಿನ ವಾರಂಬಳ್ಳಿ ಗ್ರಾಮದ ಎಸ್.ಎಮ್.ಎಸ್ ಕಾಲೇಜು ಹಿಂಭಾಗದಲ್ಲಿ ವಾಸವಿದ್ದ ಚಂದ್ರಿಕಾ (30) ಎಂಬ ಮಹಿಳೆಯು ಜೂನ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಜಿಲ್ಲೆಯ ಅಂಜಾರು ಗ್ರಾಮದ ಕಾಜಾರಗುತ್ತು ಶ್ರೀನಿವಾಸ ನಗರ ನಿವಾಸಿ ವೆಂಕಟರಮಣ ನಾಯಕ್ (50) ಎಂಬ ವ್ಯಕ್ತಿಯು ಏಪ್ರಿಲ್ 28 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉಡುಪಿ: ವೃದ್ಧ ನಾಪತ್ತೆ

ಉಡುಪಿ: ನಗರದ ಎಂ.ಜಿ.ಎಂ ಕಾಲೇಜು ಕ್ಯಾಂಟೀನ್‌ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಕೆ.ವೀರಭದ್ರ ಶೆಟ್ಟಿಗಾರ್ (61) ಎಂಬ ವ್ಯಕ್ತಿಯು ಏಪ್ರಿಲ್ 8 ರಂದು ಪುಣ್ಯಕ್ಷೇತ್ರಗಳಿಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.