ಮಲ್ಪೆ: ವ್ಯಕ್ತಿ ನಾಪತ್ತೆ

ಮಲ್ಪೆ: ಮಲ್ಪೆಯ ನಿವಾಸಿ ಸಾಮುವೆಲ್ ಜಯಕುಮಾರ ಮಾಬೆನ್ (69) ಎಂಬ ವ್ಯಕ್ತಿಯು ಜೂನ್ 3 ರಂದು ಬೆಳಗ್ಗೆ 5.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 9 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು, ಇಂಗ್ಲೀಷ್, ಮಲಯಾಳಂ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಪಿ.ಎಸ್.ಐ ಮೊ.ನಂ: 9480805447, ಮಲ್ಪೆ ವೃತ್ತ ನಿರೀಕ್ಷಕರು ಮೊ.ನಂ: […]

ಉಡುಪಿ: ಯುವಕ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ನಿಟ್ಟೂರು ನಿವಾಸಿ ದ್ಯಾಮಣ್ಣ ಜಿಗರೆ (28) ಎಂಬ ಯುವಕನು ಅಕ್ಟೋಬರ್ 30 ರಂದು ಸಂಜೆ 4 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 170 ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬದಿಯಡ್ಕದಿಂದ ನಾಪತ್ತೆಯಾಗಿದ್ದ ದಂತ ವೈದ್ಯರ ಮೃತದೇಹ ಕುಂದಾಪುರ ಬಳಿ ರೈಲ್ವೆ ಹಳಿಯಲ್ಲಿ ಪತ್ತೆ

ಕುಂದಾಪುರ: ನವೆಂಬರ್‌ 8 ರಂದು ನಾಪತ್ತೆಯಾಗಿದ್ದ ದಂತವೈದ್ಯರೊಬ್ಬರ ಮೃತದೇಹವು ಕುಂದಾಪುರ ಸಮೀಪದ ರೈಲ್ವೆ ಹಳಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿದೆ. ಕಾಸರಗೋಡಿನ ಕುಂಬಳೆ ಬದಿಯಡ್ಕದ ದಂತ ವೈದ್ಯ ಡಾ. ಎಸ್. ಕೃಷ್ಣ ಮೂರ್ತಿ (57) ನವೆಂಬರ್‌ 8 ರಂದು ನಾಪತ್ತೆಯಾಗಿದ್ದು, ಇದೀಗ ಕುಂದಾಪುರದ ಹಟ್ಟಿಯಂಗಡಿ ಗ್ರಾಮದ ಕಾಡು ಅಜ್ಜಿ ಮನೆ ಎಂಬಲ್ಲಿಯ ರೈಲ್ವೆ ಹಳಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಈ ಕುರಿತು ಮಾಹಿತಿ ದೊರೆತ ಕೂಡಲೇ ಕೃಷ್ಣ ಮೂರ್ತಿಯವರ ಕುಟುಂಬಿಕರು ಕುಂದಾಪುರಕ್ಕೆ ತೆರಳಿ ಮೃತ ದೇಹದ ಗುರುತು ಪತ್ತೆ […]

ಬೈಂದೂರು: ಮಹಿಳೆ ನಾಪತ್ತೆ

ಉಡುಪಿ: ಬೈಂದೂರು ತಾಲೂಕು ಜಡ್ಕಲ್ ಗ್ರಾಮದ ವಾಟೆಗುಂಡಿ ನಿವಾಸಿ ವಿನುತಾ (29) ಎಂಬ ಮಹಿಳೆಯು ನವೆಂಬರ್ 5 ರಂದು ಸಂಜೆ 7 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 4 ಅಡಿ 8 ಇಂಚು ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:08254-251031, 9480805434 […]

ಮಂಗಳೂರಿನಿಂದ ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಗೋವಾದಲ್ಲಿ ಪತ್ತೆ

ಮಂಗಳೂರು: ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನ ಭಾರ್ಗವಿ ಎನ್ನುವ ಬಾಲಕಿ ಸೋಮವಾರ ಮುಂಜಾನೆ 3 ಗಂಟೆಗೆ ಮಂಗಳೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದು ಅಲ್ಲಿಂದ ನಾಪತ್ತೆಯಾಗಿದ್ದ ಘಟನೆ ವರದಿಯಾಗಿತ್ತು. ಈ ಬಗ್ಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ತಮ್ಮ ಫೇಸ್‌ಬುಕ್ ವಾಲ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಾಪತ್ತೆಯಾದ ಹುಡುಗಿ ಪತ್ತೆಯಾಗಿದ್ದಾಳೆ ಎಂದು ಹೇಳಿದ್ದಾರೆ. ಇದಕ್ಕಾಗಿ ಅವರು ಜನರಿಗೆ ಧನ್ಯವಾದ ಅರ್ಪಿಸಿದ್ದಾರೆ ಮತ್ತು 14 ವರ್ಷದ ಭಾರ್ಗವಿ ಗೋವಾದಲ್ಲಿ ಪತ್ತೆಯಾಗಿದ್ದು, ಪಣಜಿ ಪೊಲೀಸ್ ಠಾಣೆಯಲ್ಲಿದ್ದಾಳೆ ಎಂದು ಸಮಾಧಾನ ವ್ಯಕ್ತಪಡಿಸಿದ್ದಾರೆ. […]