ಬಡನಿಡಿಯೂರು: ಮನೆ ಕೆಲಸಕ್ಕಿದ್ದ ಮಹಿಳೆ ನಾಪತ್ತೆ

ಉಡುಪಿ: ನಗರದ ಬಡನಿಡಿಯೂರಿನ ಮನೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಸುಶೀಲ (27) ಎಂಬ ಮಹಿಳೆಯು ಜೂನ್ 30 ರಂದು ಮನೆಯಿಂದ ಹೊರ ಹೋಗಿ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕಿವಿ ಕೇಳುವುದಿಲ್ಲ ಹಾಗೂ ಮಾತನಾಡಲು ಬರುವುದಿಲ್ಲ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ:0820-2537999, ಪಿ.ಎಸ್.ಐ ಮೊ.ನಂ:9480805447, ಉಡುಪಿ ವೃತ್ತ ನಿರೀಕ್ಷಕರು ಮೊ.ನಂ:9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ: ಯುವಕ ನಾಪತ್ತೆ

ಉಡುಪಿ: ಮೆಕಾನಿಕಲ್ ಎಂಜಿನಿಯರಿಂಗ್ ಮುಗಿಸಿ ಕೆಲಸದ ಹುಡುಕಾಟದಲ್ಲಿದ್ದ ಆಯುಷ್ (22) ಎಂಬ ಯುವಕ ಜೂನ್ 24 ರಂದು ತನ್ನ ತಂದೆಯೊಂದಿಗೆ ಜಿಲ್ಲಾಸ್ಪತ್ರೆಗೆ ತೆರಳಿದ್ದು, ಬೆಳಗ್ಗೆ 11.30 ರ ನಂತರ ಆಸ್ಪತ್ರೆಯಿಂದ ವಾಪಾಸು ಮನೆಗೂ ಬಾರದೆ, ಮೊಬೈಲ್ ಸಂಪರ್ಕಕ್ಕೂ ಸಿಗದೇ ನಾಪತ್ತೆಯಾಗಿರುತ್ತಾರೆ. 175 ಸೆಂಮೀ ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಬೈಂದೂರು: ಬಟ್ಟೆ ತರಲು ಹೋದ ಯುವತಿ ನಾಪತ್ತೆ

ಉಡುಪಿ: ಬೈಂದೂರು ತಾಲೂಕು ಮುದೂರು ಗ್ರಾಮದ ಹಾರ್ಕಿ ನಿವಾಸಿ ರೇಣುಕಾ (24) ಎಂಬ ಯುವತಿಯು ಮೇ 17 ರಂದು ಸಂಜೆ 4 ಗಂಟೆ ಸುಮಾರಿಗೆ ಮುದೂರು ಪೇಟೆಯಿಂದ ಟೈಲರಿಂಗ್ ಬಟ್ಟೆ ತರಲು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಉರುಟು ಮುಖ, ಬಿಳಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಈಕೆ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ: 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ […]

ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಲಲಿತ ಇಂಜಿನಿಯರ್ಸ್ನಲ್ಲಿ ಸೂಪರ್‌ವೈಸರ್ ಮತ್ತು ಎಲೆಕ್ಟ್ರಿಶಿಯನ್ ಆಗಿ ಕೆಲಸ ಮಾಡಿಕೊಂಡಿದ್ದ, ಪ್ರಶಾಂತ ದುರ್ಗ ನಾಯ್ಕ (38) ಎಂಬ ವ್ಯಕ್ತಿಯು ಮೇ 17 ರಿಂದ ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 6 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಕಾಪು: ರಿಯಲ್ ಎಸ್ಟೇಟ್ ಉದ್ಯಮಿ ನಾಪತ್ತೆ

ಉಡುಪಿ: ಕಾಪು ತಾಲೂಕು ಕಟಪಾಡಿ ಕೋಟೆ ಗ್ರಾಮದ ರಿಯಲ್ ಎಸ್ಟೇಟ್ ಉದ್ಯಮಿ ಪ್ರಕಾಶ್ ರಾವ್ (46) ಎಂಬ ವ್ಯಕ್ತಿಯು ಮೇ 9 ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ದೇವಸ್ಥಾನಕ್ಕೆಂದು ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ: 9480805449, ಉಡುಪಿ […]