ಇಂದ್ರಧನುಷ್ ಲಸಿಕಾ ಕಾರ್ಯಕ್ರಮದಲ್ಲಿ ಶೇ.100 ಪ್ರಗತಿ ಸಾಧನೆ ಗುರಿ: ಡಾ.ವಿದ್ಯಾಕುಮಾರಿ ಕೆ.
ಉಡುಪಿ: ಇಂದ್ರಧನುಷ್ ಅಭಿಯಾನದಡಿ ನೀಡುತ್ತಿರುವ ಲಸಿಕಾಕರಣಗಳಿಂದ ಮಕ್ಕಳು ಹಾಗೂ ಗರ್ಭಿಣಿ ಮಹಿಳೆಯರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಕಾರಿಯಾಗುತ್ತದೆ. ಮೊದಲನೇ ಹಂತದಲ್ಲಿ 3,212 ಮಕ್ಕಳಿಗೆ ಲಸಿಕೆ ನೀಡಲು ಗುರಿ ಹೊಂದಿದ್ದು, 3,203 ಮಕ್ಕಳಿಗೆ ಲಸಿಕೆ ನೀಡಿ, ಶೇ. 99.72 ರಷ್ಟು, 708 ಗರ್ಭಿಣಿ ಮಹಿಳೆಯರಿಗೆ ಲಸಿಕೆ ನೀಡಲು ಗುರಿ ಹೊಂದಿ 708 ಜನರಿಗೂ ಲಸಿಕೆ ನೀಡಿ ಶೇ. 100 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಜಿಲಾಧಿಕಾರಿ ಡಾ.ವಿದ್ಯಾಕುಮಾರಿ ಕೆ. ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ […]