ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ
ಉಡುಪಿ: ರಕ್ತದಾನದಿಂದ ಪ್ರಾಣಾಪಾಯದಲ್ಲಿರುವ ಇನ್ನೊಬ್ಬರ ಜೀವ ಉಳಿಸಲು ಸಾಧ್ಯವಾಗುತ್ತದೆ ಎಂದು ಡಾ.ಟಿ.ಎಂ.ಎ ಪೈ ಪಾಲಿಟೆಕ್ನಿಕ್‌ನ ನಿರ್ದೇಶಕ ಟಿ. ರಂಗ ಪೈ ಹೇಳಿದರು. ಮಂಗಳವಾರ ನಗರದ ಮಣಿಪಾಲ ಎಂ.ಐ.ಟಿ ಕ್ಯಾಂಪಸ್‌ನ ಡಾ. ಟಿ.ಎಂ.ಎ ಪೈ ಪಾಲಿಟೆಕ್ನಿಕ್ ಸಭಾಂಗಣದಲ್ಲಿ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ರಕ್ತನಿಧಿ ಕೇಂದ್ರ ಕೆ.ಎಂ.ಸಿ ಮಣಿಪಾಲ […]
ಎಂಐಟಿ ಕಾಲೇಜಿನಲ್ಲಿ ಎನ್ ಸಿ ಸಿ ವಿದ್ಯಾರ್ಥಿಗಳಿಗಾಗಿ ರೋಯಿಂಗ್ ಸಿಮ್ಯುಲೇಟರ್ ಅನಾವರಣ
ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನ ಘಟಕವಾದ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ, ಎನ್ ಸಿ ಸಿ ವಿದ್ಯಾರ್ಥಿಗಳ ರೋಯಿಂಗ್ ಮತ್ತು ದೈಹಿಕ ತರಬೇತಿಯನ್ನು ಸುಧಾರಿಸಲು ಮತ್ತು ಹೊಸತನವನ್ನು ಉತ್ತೇಜಿಸಲು ಮೊತ್ತ ಮೊದಲ ಬಾರಿಗೆ ರೋಯಿಂಗ್ ಸಿಮ್ಯುಲೇಟರ್ ಅನ್ನು ಅನಾವರಣಗೊಳಿಸಲಾಯಿತು. ಸಮಾರಂಭದಲ್ಲಿ ಮಾಹೆ ಉಪಕುಲಪತಿ, ಲೆಫ್ಟಿನೆಂಟ್ ಜನರಲ್ (ಡಾ) ಎಂ.ಡಿ ವೆಂಕಟೇಶ್, ಹಾಗೂ ಎಂಐಟಿ ಮತ್ತು ಮಾಹೆಯ ಇತರ ಗಣ್ಯರು ಉಪಸ್ಥಿತರಿದ್ದರು. ಲೆಫ್ಟಿನೆಂಟ್ ಜನರಲ್ (ಡಾ.) ಎಂ.ಡಿ ವೆಂಕಟೇಶ್ ಮಾತನಾಡಿ, ಇಂತಹ ಹಲವು ವಿನೂತನ […]
ಎಂಐಟಿಯ ಪ್ರಾಧ್ಯಾಪಕರಾದ ಡಾ. ನರೇಂದ್ರ ಖಾತ್ರಿ ಮತ್ತು ಡಾ. ನೀರಜ್ ಅವರಿಗೆ ಅಂತರರಾಷ್ಟ್ರೀಯ ಪ್ರಶಸ್ತಿ
ಮಣಿಪಾಲ: ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ನರೇಂದ್ರ ಖಾತ್ರಿ ಮತ್ತು ಡಾ. ನೀರಜ್ ಎರಡು ಗೌರವಾನ್ವಿತ ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ ತಮ್ಮ ಅಸಾಧಾರಣ ಸಂಶೋಧನಾ ಕೊಡುಗೆಗಳಿಗಾಗಿ ಗುರುತಿಸಲ್ಪಟ್ಟಿದ್ದಾರೆ ಹಾಗೂ ಸಂಸ್ಥೆಗೆ ಪ್ರಶಸ್ತಿಗಳನ್ನು ತಂದುಕೊಟ್ಟಿದ್ದಾರೆ ಮತ್ತು ಅತ್ಯಾಧುನಿಕ ಸಂಶೋಧನೆಯಲ್ಲಿ ಅದರ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ದುಬೈನ ಅಮಿಟಿ ವಿಶ್ವವಿದ್ಯಾನಿಲಯದಲ್ಲಿ ನಡೆದ ಕಂಪ್ಯೂಟೇಶನಲ್ ಇಂಟೆಲಿಜೆನ್ಸ್ ಮತ್ತು ನಾಲೆಡ್ಜ್ ಎಕಾನಮಿ (ICCIKE2023) ಕುರಿತ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಡಾ. ನರೇಂದ್ರ ಖಾತ್ರಿ ಅವರಿಗೆ ಅತ್ಯುತ್ತಮ ಪೇಪರ್ ಪೆಸೆಂಟೇಷನ್ ಗಾಗಿ […]
ಮಣಿಪಾಲ: ಎಂಐಟಿ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭ
ಮಣಿಪಾಲ: ಪ್ರತಿಷ್ಠಿತ ಭಾರತೀಯ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಸಂಸ್ಥೆ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಹೊಸ ಶೈಕ್ಷಣಿಕ ವರ್ಷವನ್ನು ಜುಲೈ 17 ರಂದು ಉದ್ಘಾಟಿಸಲಾಯಿತು. ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರು ಸಮಾರಂಭವನ್ನು ಉದ್ಘಾಟಿಸಿದರು ಮತ್ತು ರಾಷ್ಟ್ರ ನಿರ್ಮಾಣ ಪ್ರಕ್ರಿಯೆಗೆ ಇಂತಹ ಅದ್ಭುತ ಕೊಡುಗೆಗಾಗಿ ಮೆಚ್ಚುಗೆಯನ್ನು ವ್ಯಕ್ತಪಡಿಸಿ, ಇನ್‌ಸ್ಟಿಟ್ಯೂಟ್ ಆಫ್ ಎಮಿನೆನ್ಸ್ ಮತ್ತು ಅಗ್ರ ಶ್ರೇಯಾಂಕದ ಸಂಸ್ಥೆಯನ್ನು ಜಿಲ್ಲೆಗೆ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು. ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಉಪಕುಲಪತಿ ಲೆಫ್ಟಿನೆಂಟ್ […]
ಎಂಐಟಿ ಅಕಾಡೆಮಿಕ್ಸ್ ವಿಭಾಗದ ಶ್ರೀಮತಿ ಮನೋರಮಾ ಅವರಿಗೆ ಬೀಳ್ಕೊಡುಗೆ
ಮಣಿಪಾಲ: ಎಂಐಟಿಯಲ್ಲಿ 35 ವರ್ಷಗಳಿಂದ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿ ಇದೀಗ ಅಕಾಡೆಮಿಕ್ಸ್ ವಿಭಾಗದಿಂದ ನಿವೃತ್ತಿ ಹೊಂದಿದ್ದ ಸಿಬ್ಬಂದಿ ಶ್ರೀಮತಿ ಮನೋರಮಾ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಸಂಸ್ಥೆಯ ನಿರ್ದೇಶಕ ಕಮಾಂಡರ್ ಡಾ. ಅನಿಲ್ ರಾಣಾ, ಜಂಟಿ ನಿರ್ದೇಶಕ ಡಾ. ಸೋಮಶೇಖರ್ ಭಟ್, ಸಹ ನಿರ್ದೇಶಕ( ಅಕಾಡೆಮಿಕ್ಸ್) ಡಾ. ರವಿರಾಜ್ ಅಧಿಕಾರಿ, ಅಕಾಡೆಮಿಕ್ಸ್ ವಿಭಾಗದ ಸಹಾಯಕ ನಿರ್ದೇಶಕರು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.