ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ: ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಭರದ ಸಿದ್ಧತೆ
ಮುಲ್ಕಿ: ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ಜ. 17ರಂದು ನಡೆಯಲಿರುವ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶಕ್ಕೆ ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಭರದ ಸಿದ್ಧತೆ ನಡೆಯುತ್ತಿದ್ದು 14 ಪಂಚಾಯತ್ ಹಾಗೂ ಎರಡು ಪಟ್ಟಣ ಪಂಚಾಯತ್ ಹಾಗೂ ಒಂದು ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಸದಸ್ಯರನ್ನು, ಪ್ರತಿಯೊಬ್ಬ ಕಾರ್ಯಕರ್ತರನ್ನು ಭಾಗವಹಿಸಲು ಸಿದ್ಧತೆ ನಡೆಸಲಾಗಿದೆ ಎಂದು ಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಸಮಾವೇಶ ನಡೆಯುತ್ತಿದ್ದು ಮುಖ್ಯಮಂತ್ರಿ […]
ಮೂಡುಶೆಡ್ಡೆಯಲ್ಲಿ ಚುನಾವಣೋತ್ತರ ಗಲಭೆ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
ಮಂಗಳೂರು: ಮೂಡುಶೆಡ್ಡೆಯಲ್ಲಿ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಐದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಜ್ಪೆ, ಕಾವೂರು, ಮೂಡುಬಿದಿರೆ, ಸುರತ್ಕಲ್ ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಂಶುಕುಮಾರ್ ತಿಳಿಸಿದ್ದಾರೆ. ಬುಧವಾರ ತಡರಾತ್ರಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಕಲ್ಲು […]
ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರಿಂದ ಗ್ಯಾರಂಟಿ ಕಾರ್ಡ್ ವಿತರಣೆ
ಹೊಸಬೆಟ್ಟು: ಮುಲ್ಕಿ-ಮೂಡುಬಿದಿರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಹೊಸಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಚ್ಚೆಮೊಗರು, ಹೊಸಬೆಟ್ಟು ಹಾಗೂ ಹಿದಾಯತ್ ನಗರ ಪ್ರದೇಶಗಳಲ್ಲಿ ಕಾಂಗ್ರೆಸ್ ಪಕ್ಷದ ಭರವಸೆಯ ಯೋಜನೆಗಳ ಕುರಿತು ಗ್ಯಾರಂಟಿ ಕಾರ್ಡ್ ಗಳನ್ನು ಮನೆಮನೆಗೆ ಭೇಟಿ ನೀಡಿ ವಿತರಿಸಿದರು.
ಸುರತ್ಕಲ್ ಟೋಲ್ ಗೇಟಿಗೆ ಮುತ್ತಿಗೆ: ಪ್ರತಿಭಟನಾಕಾರರ ಬಂಧನ
ಸುರತ್ಕಲ್: ಅಕ್ಟೋಬರ್ 18 ರಂದು ಟೋಲ್ ಗೇಟ್ ವಿರೋಧಿ ಸಮಿತಿಯಿಂದ ಕರೆಯಲಾಗಿದ್ದ ಪ್ರತಿಭಟನೆಯ ಕಾವು ಜೋರಾಗಿದ್ದು, ಹಲವರ ಬಂಧನವಾಗಿದೆ. ಪ್ರತಿಭಟನಾಕಾರರು ಟೋಲ್ ಗೇಟ್ ಮುತ್ತಿಗೆ ತಡೆಯಲು ಹಾಕಲಾಗಿದ್ದ ಬ್ಯಾರಿಕೇಡ್ ಅನ್ನು ದಾಟಿ ಟೋಲ್ ಗೆ ಮುತ್ತಿಗೆ ಹಾಕಿದ್ದಾರೆ. ಕಾಂಗ್ರೆಸ್ ನಾಯಕ ಮಿಥುನ್ ರೈ ಟೋಲ್ ಗೇಟ್ ಮೇಲೆ ಹತ್ತಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ತೆರವುಗೊಳಿಸಲು ಲಾಠಿ ಪ್ರಹಾರ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕೆಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಪ್ರತಿಭಟನೆಯಲ್ಲಿ ನಿರತರಾಗಿದ್ದ ಮಾಜಿ ವಿಧಾನ್ ಪರಿಷತ್ ಸದಸ್ಯ ಐವನ್ ಡಿಸೋಜಾ, […]
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದದ ಮಿಥುನ್ ರೈ ಬಾಲಿಷ ಹೇಳಿಕೆ ಖಂಡನೀಯ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ತನ್ನ ಸ್ವಕ್ಷೇತ್ರದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿರುವ ಪುಂಡ ಪುಡಾರಿ ರಾಜಕಾರಿಣಿ ಮಿಥುನ್ ರೈ ಅವರಿಗೆ ಕ್ರಿಯಾಶೀಲ ಕೇಂದ್ರ ಸಚಿವೆ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರ ಬಗ್ಗೆ ಮಾತನಾಡಲು ಕವಡೆ ಕಾಸಿನ ಕಿಮ್ಮತ್ತೂ ಇಲ್ಲ. ತನ್ನ ಕಾರ್ಯಕ್ಷಮತೆಯಿಂದ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ಪಡೆದಿರುವ ಶೋಭಾ ಕರಂದ್ಲಾಜೆಯವರ ಹೆಸರೆತ್ತಲೂ ಯೋಗ್ಯತೆ ಇಲ್ಲದ ಅಪ್ರಬುದ್ಧ ರಾಜಕಾರಿಣಿ ಮಿಥುನ್ ರೈ ಅವರ ಸಚಿವೆ ಶೋಭಾ ವಿರುದ್ಧ ನೀಡಿದ ಬಾಲಿಷ ಹೇಳಿಕೆ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ […]