ಮಿಯ್ಯಾರು ಬಳಿ ಕಾರು- ಆಟೊ ರಿಕ್ಷಾ ಮಧ್ಯೆ ಭೀಕರ ಅಪಘಾತ; ಇಬ್ಬರು ಗಂಭೀರ

ಕಾರ್ಕಳ: ಕಾರು ಹಾಗೂ ಆಟೊ ರಿಕ್ಷಾ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಆಟೊ ಚಾಲಕ ಸಹಿತ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಚರ್ಚಿನ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ. ಆಟೊ ಚಾಲಕ ಶೇಖರ್ ಮಡಿವಾಳ ಹಾಗೂ ಇನ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಆಟೊ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ. ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ಕಾರ್ಕಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ […]