ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಗೆ ಕೊರೊನಾ ಪಾಸಿಟಿವ್
ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್. ಮೆಂಡನ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಶಾಸಕರಿಗೆ ಯಾವುದೇ ಕೊರೊನಾ ಲಕ್ಷಣ ಕಂಡುಬಂದಿಲ್ಲ. ಹಾಗಾಗಿ ಕೋವಿಡ್ ಕೇರ್ ಸೆಂಟರ್ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ ಶಾಸಕರ ಆಪ್ತ ಕಾರ್ಯದರ್ಶಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಶಾಸಕರು ಸ್ವಯಂ ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದರು. ಮುಂಜಾಗೃತಾ ಕ್ರಮವಾಗಿ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರ ವರದಿಯಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ.