ವಾರದೊಳಗಡೆ ನೇತ್ರಾವತಿ ಸೇತುವೆಗೆ ಸಿಸಿ ಟಿವಿ, ತಂತಿ ಬೇಲಿಗೆ ಟೆಂಡರ್: ಶಾಸಕ ಕಾಮತ್
ಮಂಗಳೂರು: ನೇತ್ರಾವತಿ ಸೇತುವೆಯ ಇಕ್ಕೆಲಗಳಲ್ಲಿ ತಂತಿ ಬೇಲಿ ಹಾಗೂ ಸಿಸಿ ಟಿವಿ ಅಳವಡಿಕೆ ಕಾಮಗಾರಿಗೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವು ಈ ವಾರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಈ ಹಿಂದೆ ಹೇಳಿದಂತೆ ನೇತ್ರಾವತಿ ಸೇತುವೆಯ ಮೇಲೆ ಸಿಸಿ ಟಿವಿ ಅಳವಡಿಸಲು 5 ಲಕ್ಷ ಹಾಗೂ ಸೇತುವೆಗೆ ರಕ್ಷಣಾ ಬೇಲಿ ನಿರ್ಮಾಣ ಕಾಮಗಾರಿಗೆ 58 ಲಕ್ಷ ರೂಪಾಯಿಯನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವು ಕೈಗೆತ್ತಿಕೊಳ್ಳಲಿದೆ ಎಂದು ತಿಳಿಸಿದ್ದಾರೆ. ಸಿಸಿಟಿವಿ ಹಾಗೂ […]