ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಗೆ ಕೊರೊನಾ ಪಾಸಿಟಿವ್

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನಿಲ್‌ ಕುಮಾರ್‌ ಅವರಿಗೆ ಇಂದು ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಅವರು ಸಾಮಾಜಿಕ ಜಾಲತಾಣದ ಮೂಲಕ‌ ಮಾಹಿತಿ‌ ನೀಡಿದ್ದಾರೆ. ಶಾಸಕರು ಕಳೆದ ಮೂರು ತಿಂಗಳಿನಿಂದ ಕೇರಳದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಸದ್ಯ ಶಾಸಕರು ಕ್ವಾರಂಟೈನ್‌ ಗೆ ಒಳಗಾಗಿದ್ದು, ತಮ್ಮ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕೋವಿಡ್‌ ಟೆಸ್ಟ್‌ ಮಾಡಿಸುವಂತೆ ವಿನಂತಿಸಿದ್ದಾರೆ.