ಉಡುಪಿ ಶಾಸಕರು ಲಸಿಕಾ ಕೇಂದ್ರಕ್ಕೆ ಬಂದು ಜನರ ಸಮಸ್ಯೆ ಆಲಿಸಬೇಕು: ರಮೇಶ್ ಕಾಂಚನ್ ಆಗ್ರಹ
ಉಡುಪಿ: ಕೋವಿಡ್ ಎರಡನೇ ಅಲೆ ತೀವ್ರಗೊಂಡಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮಯದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ರಘುಪತಿ ಭಟ್ ಅವರು ಲಸಿಕಾ ಕೇಂದ್ರದತ್ತ ದೌಡಾಯಿಸಿ ಜನರ ಸಮಸ್ಯೆಯನ್ನು ಆಲಿಸಬೇಕು ಎಂದು ನಗರಸಭಾ ವಿರೋಧ ಪಕ್ಷದ ನಾಯಕರಾದ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ. ಉಡುಪಿಯಲ್ಲಿ ಆಸ್ಪತ್ರೆಗಳು ಈಗಾಗಲೇ ಕೋವಿಡ್ ರೋಗಿಗಳಿಂದ ಭರ್ತಿಯಾಗಿದೆ. ತೀವ್ರ ಅಸ್ವಸ್ಥ ಗೊಂಡವರಿಗೆ ವೆಂಟಿಲೇಟರ್ ಐಸಿಯು ದೊರೆಯುತ್ತಿಲ್ಲ. ನಿಮ್ಮ ಆಡಳಿತದಲ್ಲಿ ಜನರ ಪ್ರಾಣದ ಗತಿ ದೇವರೇ ಗತಿ ಎಂಬಂತೆ ಆಗಿದೆ. ಹೀಗಾಗಿ ಈ […]