ಮಣಿಪಾಲ್ ಮ್ಯಾರಥಾನ್ – 2023: ವಿಜೇತರಿಗೆ ಬಹುಮಾನ ವಿತರಣೆ
ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಹಾಗೂ ವಿವಿಧ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ನಡೆದ “ಮಣಿಪಾಲ್ ಮ್ಯಾರಥಾನ್ – 2023” ರ ಬಹುಮಾನ ವಿತರಣಾ ಸಮಾರಂಭವು ಭಾನುವಾರ ನಡೆದಿದ್ದು, ಶಾಸಕ ಕೆ. ರಘುಪತಿ ಭಟ್ ಭಾಗವಹಿಸಿದರು. 42 ಕಿ.ಮೀ ಫುಲ್ ಮ್ಯಾರಥಾನ್, 21 ಕಿ.ಮೀ ಆಫ್ ಮ್ಯಾರಥಾನ್, 10 ಕಿ.ಮೀ ಮ್ಯಾರಥಾನ್, 5 ಕಿ.ಮೀ ಮ್ಯಾರಥಾನ್, 3 ಕಿ.ಮೀ ರೋಟರಿ ರನ್ ನಲ್ಲಿ ಸ್ಪರ್ಧಿಸಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಭಗವದ್ಗೀತೆಯ ಶ್ರೀಕೃಷ್ಣನ ಸಂದೇಶಗಳು ಸಾರ್ವಕಾಲಿಕ: ರಘುಪತಿ ಭಟ್
ಉಡುಪಿ: ಭಗವದ್ಗೀತೆಯ ಮೂಲಕ ಶ್ರೀಕೃಷ್ಣ ಸಾರಿರುವ ಸಂದೇಶಗಳು ಸರ್ವಕಾಲಕ್ಕೂ ವಿಶ್ವಕ್ಕೆ ಅನ್ವಯವಾಗಲಿವೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದರು. ಅವರು ಶುಕ್ರವಾರ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗ ಮತ್ತು ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಸಹಕಾರದೊಂದಿಗೆ ಆಯೋಜಸಿದ್ದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಾವಿರಾರು ವರ್ಷಗಳ ಹಿಂದೆ ಶ್ರೀ ಕೃಷ್ಣ ಭೋದಿಸಿದ ಭಗವದ್ಗೀತೆಯಲ್ಲಿ ಮನುಷ್ಯನ ಸುಗಮ ಜೀವನ ವಿಧಾನ ಆಡಳಿತ ವ್ಯವಸ್ಥೆ ಸಂದೇಶಗಳು […]