ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆದ ಶಾಸಕ ಎಸ್.ಅಂಗಾರ
ಬೆಂಗಳೂರು: ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆದ ಶಾಸಕ ಎಸ್.ಅಂಗಾರ ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಪಕ್ಷದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತೇನೆ. ನಾನು ಬೇಸರದಲ್ಲಿ ಮತ್ತು ಉದ್ವೇಗದಲ್ಲಿ ಈ ಹಿಂದೆ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದೆ. ಆದರೆ ಆ ಮಾತನ್ನು ವಾಪಸ್ಸು ಪಡೆಯುತ್ತೇನೆ. ಮುಂದೆ ಪಕ್ಷದ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಿ ಗೆಲ್ಲಿಸುವುದು ನನ್ನ ಗುರಿ ಎಂದು ಹೇಳಿದ್ದಾರೆ.