ಶಾಸಕ ಅಖಂಡ ಶ್ರೀನಿವಾಸ ಮೂರ್ತಿಗೆ ಅನ್ಯಾಯ ಆಗಲು ಬಿಡುವುದಿಲ್ಲ: ನಳಿನ್ ಕುಮಾರ್ ಕಟೀಲ್

ಉಡುಪಿ: ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಅವರೇ ಬೆಂಬಲಕ್ಕೆ ರಾಜ್ಯ ಸರ್ಕಾರ ನಿಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಉಡುಪಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿಹಚ್ಚಿದ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡವಿದೆ. ಸ್ವತಃ ಶಾಸಕರೇ ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ದೂರು ನೀಡಿದ್ದಾರೆ. ಆದರೆ ಈಗ ಸಂಪತ್ ರಾಜ್ ತನಿಖೆಯಿಂದ ತಪ್ಪಿಸಿಕೊಳ್ಳಲು ತಲೆಮರೆಸಿಕೊಂಡಿದ್ದಾರೆ. ಇನ್ನೊಂದೆಡೆ ಡಿ.ಕೆ. ಶಿವಕುಮಾರ್ […]