ಕಾರ್ಕಳ ತಾಪಂ ನೂತನ ಕಟ್ಟಡಕ್ಕೆ ಶಾಸಕ ಸುನಿಲ್ ಕುಮಾರ್ ಚಾಲನೆ
ಕಾರ್ಕಳ: ಕಾರ್ಕಳ ತಾಲೂಕು ಪಂಚಾಯತ್‌ನ ನೂತನ ಕಟ್ಟಡಕ್ಕೆ ಶಾಸಕ ವಿ. ಸುನಿಲ್ ಕುಮಾರ್ ಸೋಮವಾರ ಶಿಲಾನ್ಯಾಸ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ₹ 1.64 ಕೋಟಿ ವೆಚ್ಚದಲ್ಲಿ ತಾಲೂಕು ಪಂಚಾಯತ್‌ನ ನೂತನ ಕಟ್ಟಡ ನಿರ್ಮಾಣವಾಗಲಿದೆ. ಒಂದು ವರ್ಷದಲ್ಲಿ ಕಾಮಗಾರಿ ಮುಗಿಸುವ ಆಶಯ ಹೊಂದಲಾಗಿದೆ ಎಂದರು. ಸ್ವಚ್ಛ ಕಾರ್ಕಳ ಸ್ವರ್ಣ ಕಾರ್ಕಳ ಪರಿಕಲ್ಪನೆಯಡಿ ಕಾರ್ಕಳದ ಬಹುತೇಕ ಎಲ್ಲ ಸರಕಾರಿ ಕಚೇರಿಗಳನ್ನು ಪುನಶ್ಚೇತನದೊಂದಿಗೆ ಆಧುನೀಕರಣ ಗೊಳಿಸಲಾಗಿದೆ. ಇದರಿಂದ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ವೇಗ ದೊರೆಯಲಿದೆ ಎಂದರು. ತಾ.ಪಂ. ಅಧ್ಯಕ್ಷೆ ಸೌಭಾಗ್ಯ […]