ಉಡುಪಿ ಕ್ಷೇತ್ರದ ಯೋಜನೆಗಳಿಗೆ ವಿಶೇಷ ಬಜೆಟ್ ಮಂಜೂರು ಮಾಡುವಂತೆ ಸಿಎಂಗೆ ಶಾಸಕ ಯಶಪಾಲ್ ಸುವರ್ಣ ಮನವಿ.

ಉಡುಪಿ, ಫೆ.20: ಮುಂಬರುವ ರಾಜ್ಯ ಬಜೆಟ್‌ನಲ್ಲಿ ಉಡುಪಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಹಣ ಮೀಸಲಿಡಬೇಕು ಮತ್ತು ತುಳುನಾಡಿನ ಧಾರ್ಮಿಕ ಸಂಪ್ರದಾಯಗಳನ್ನು ಮುಂದುವರಿಸಲು ಅನುಕೂಲ ಮಾಡಿಕೊಡಬೇಕು ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ಶಿಕ್ಷಣ ಕ್ಷೇತ್ರದಲ್ಲಿ ನಿರಂತರವಾಗಿ ಸಾಧನೆ ಮಾಡುತ್ತಿರುವ ಉಡುಪಿ ಜಿಲ್ಲೆಯ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಸುಧಾರಿಸಲು ವಿಶೇಷ ಅನುದಾನದ ಅಗತ್ಯವನ್ನು ಶಾಸಕ ಸುವರ್ಣ ಅವರು ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ. ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡದ ಕಾರ್ಯನಿರ್ವಹಣೆಗೆ ಹೆಚ್ಚುವರಿಯಾಗಿ 48.36 ಕೋಟಿ […]