ಉಡುಪಿ: ನೂತನ ಶಾಸಕ ಯಶ್ ಪಾಲ್ ಸುವರ್ಣ ಅಭಿನಂದನಾ ಸಮಾರಂಭ

ಉಡುಪಿ: ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಯಶ್ಪಾಲ್ ಎ. ಸುವರ್ಣರವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಬಿಜೆಪಿ ಜಿಲ್ಲಾಧ್ಯಕ್ಷಕುಯಿಲಾಡಿ ಸುರೇಶ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕ ಮನೋಹರ್ ಎಸ್. ಕಲ್ಮಾಡಿ, ಉಡುಪಿ […]

ಮೇ 25 ರಂದು ಉಡುಪಿ ಜಿಲ್ಲೆಯ ನೂತನ ಶಾಸಕರ ಅಭಿನಂದನಾ ಕಾರ್ಯಕ್ರಮ

ಉಡುಪಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮಗದೊಮ್ಮೆ ಭರ್ಜರಿ ವಿಜಯ ದಾಖಲಿಸಿರುವುದು ಉಡುಪಿ ಜಿಲ್ಲಾ ಬಿಜೆಪಿಗೆ ಹೆಮ್ಮೆ ತಂದಿದೆ. ಈ ಪ್ರಯುಕ್ತ ಮೇ 25, ಗುರುವಾರ ಸಂಜೆ ಗಂಟೆ 5.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯ ಬಳಿ ನಿರ್ಮಿಸಿರುವ ವೇದಿಕೆಯಲ್ಲಿ ಉಡುಪಿ ಜಿಲ್ಲೆಯ ಐವರು ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ ಉಡುಪಿ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ವಿ.ಸುನೀಲ್ ಕುಮಾರ್ ಕಾರ್ಕಳ, ಕಿರಣ್ ಕುಮಾರ್ […]

ಚನ್ನಗಿರಿ ಬಿಜೆಪಿ ಶಾಸಕನ ಪುತ್ರನ ಬಳಿ 7 ಕೋಟಿ 62 ಲಕ್ಷ ರೂ.ಪತ್ತೆ ಮಾಡಿದ ಲೋಕಾಯುಕ್ತ; 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು: ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ, ಕೆಎಸ್​ಡಿಎಲ್​ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಟೆಂಡರ್​ ಒಂದಕ್ಕೆ ಸಂಬಂಧಿಸಿದಂತೆ 80 ಲಕ್ಷ ಕಮಿಷನ್​​ ಕೇಳಿದ್ದು ಈ ಸಂಬಂಧ ಮುಂಗಡವಾಗಿ 40 ಲಕ್ಷ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪ್ರಶಾಂತ್ ನನ್ನು ಬಂಧಿಸಿದ್ದರು. ಬಳಿಕ ಪ್ರಶಾಂತ್‌ ಕಚೇರಿ ಮತ್ತು ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಾಡಿದ್ದರು. ಈ ವೇಳೆ ಆತನ ಮನೆ ಹಾಗೂ ಕಚೇರಿಗಳಿಂದ 7 ಕೋಟಿ 62 ಲಕ್ಷ ರೂ. ಹಣ ಪತ್ತೆಯಾಗಿದೆ. ಲಂಚ ಸ್ವೀರಿಸುತ್ತಿದ್ದ […]

ಯಕ್ಷಗಾನ ಕಲೆಯ ಮೇರು ಕಲಾವಿದ ಕುಂಬ್ಳೆ ಸುಂದರ ರಾವ್ ಇನ್ನಿಲ್ಲ

ಮಂಗಳೂರು: ಯಕ್ಷಗಾನ ಕಲೆಯ ಮೇರು ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್(88) ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅಂತ್ಯ ಸಂಸ್ಕಾರ ಡಿ.1 ರಂದು (ನಾಳೆ) ನೆರವೇರಲಿದೆ. ಮಂಗಳೂರು ಪಂಪ್ವೆಲ್ ಬಳಿ ಇರುವ ಅವರ ಮನೆಯಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರಿಗೆ ವೀಕ್ಷಣೆಗೆ ಇಡಲಾಗುವುದು. ಅವರು ಪತ್ನಿ, ಇಬ್ಬರು ಪುತ್ರರು ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮೇರು ಕಲಾವಿದನ ಅಗಲಿಕೆಗೆ ಗಣ್ಯರು, ಯಕ್ಷಗಾನ ಕಲಾವಿದರು ಮತ್ತು ಸಾರ್ವಜನಿಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಶಾಸಕ ಹರೀಶ್ ಪೂಂಜಾಗೆ ಜೀವ ಬೆದರಿಕೆ ಪ್ರಕರಣ: ಕಾರು ಓವರ್ ಟೇಕ್ ವಿಚಾರದಲ್ಲಿ ನಿಂದನೆ; ಎಸ್ಪಿ ಋಷಿಕೇಷ್ ಸೋನಾವಣೆ ಸ್ಪಷ್ಟಣೆ

ಬೆಳ್ತಂಗಡಿ: ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ತಲವಾರು ತೋರಿಸಿ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ರಿಯಾಜ್(38) ನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಫಳ್ನೀರ್ ನಿವಾಸಿ ರಿಯಾಜ್ ಎಂಬಾತನನ್ನು ಸ್ಕಾರ್ಪಿಯೋ ಕಾರಿನ ಸಹಿತ ವಶಕ್ಕೆ ಪಡೆಯಲಾಗಿದೆ. ಬಂಧನದ ಬಳಿಕ ದೂರುದಾರರಾದ ಹರೀಶ್ ಪೂಂಜಾ ಕಾರು ಚಾಲಕ ನವೀನ್, ರಿಯಾಜ್ ಗುರುತು ಪತ್ತೆ ಹಚ್ಚಿದ್ದಾರೆ. ಆರೋಪಿ ಬಂಧನದ ಬಗ್ಗೆ ದ.ಕ ಜಿಲ್ಲಾ ಎಸ್ಪಿ ಋಷಿಕೇಷ್ ಸೋನಾವಣೆ ಮಾಹಿತಿ ನೀಡಿದ್ದು, ಆರೋಪಿಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ […]