ಸಹಕಾರಿ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಮಹತ್ತರವಾದದ್ದು: ಎಂ.ಎನ್. ರಾಜೇಂದ್ರ ಕುಮಾರ್
ಉಡುಪಿ: ಸಹಕಾರಿ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಮಹತ್ತರವಾಗಿದ್ದು, ಸದೃಢ ಆರ್ಥಿಕ ಸಮಾಜ ನಿರ್ಮಾಣ ಮತ್ತು ಅಭಿವೃದ್ಧಿಗಾಗಿ ಮಹಿಳೆಯರು ಇನ್ನಷ್ಟು ಪರಿಣಾಮಕಾರಿಯಾಗಿ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು ಎಂದು ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. 66ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಉಡುಪಿ ಸ್ತ್ರೀ ಶಕ್ತಿ ಸ್ವ ಸಹಾಯ ಗುಂಪುಗಳ ವಿವಿಧೋದ್ದೇಶ ಸಹಕಾರ ಸಂಘ, ಉಡುಪಿ ಮಹಿಳಾ ಗ್ರಾಹಕರ ವಿವಿಧೋದ್ದೇಶ ಸಹಕಾರ […]
‘ಇಫ್ಕೊ’ ನಿರ್ದೇಶಕರಾಗಿ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆ
ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಹೊಸದಿಲ್ಲಿಯ ಇಂಡಿಯನ್ ಫಾರ್ಮರ್ಸ್ ಫರ್ಟಿ ಲೈಸರ್ ಕೋ-ಆಪರೇಟಿವ್ (ಇಫ್ಕೊ) ಸಂಸ್ಥೆಯ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೊಸದಿಲ್ಲಿಯಲ್ಲಿ ಮೇ. 10ರಂದು ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ನಡೆದಿತ್ತು. ಪ್ರಸ್ತುತ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿ.ಯ ಅಧ್ಯಕ್ಷರಾಗಿದ್ದಾರೆ. ಅವರು ದೇಶದ ಅತೀ ದೊಡ್ಡ ಸಹಕಾರಿ ಸಂಸ್ಥೆ ಇಫ್ಕೊದಲ್ಲಿ ರಾಜ್ಯದ ಪ್ರತಿನಿಧಿಯಾಗಿದ್ದಾರೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರಕಟನೆ […]