ಸಹಕಾರ ಸಂಘಗಳನ್ನು ಉಳಿಸಿಕೊಳ್ಳಬೇಕೆಂಬ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಎಂ.ಎನ್. ರಾಜೇಂದ್ರ ಕುಮಾರ್

ಉಡುಪಿ: ಜನರು ಸಹಕಾರಿ ಸಂಘಗಳ ಕುರಿತಂತೆ ನಿರಾಶವಾದಿಗಳಾಗುವ ಅಗತ್ಯವಿಲ್ಲ. ಆಶಾವಾದಿಗಳಾಗಿ ಸಹಕಾರಿ ಸಂಘಗಳನ್ನು ಉಳಿಸಿಕೊಳ್ಳಬೇಕೆಂಬ ಚಿಂತನೆಯನ್ನು ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಡಾ. ಎಂ.ಎನ್‌. ರಾಜೇಂದ್ರ ಕುಮಾರ್‌ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ಸಂಯುಕ್ತ ಆಶ್ರಯದಲ್ಲಿ ಉಡುಪಿ ಅಮ್ಮಣ್ಣಿರಾಮಣ್ಣ ಸಭಾಂಗಣದಲ್ಲಿ ಆಯೋಜಿಸಿದ ರಾಜ್ಯಮಟ್ಟದ ಬಹೃತ್‌ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ಬದುಕಿಗೆ ಇನ್ನಷ್ಟು ಬಲ ಬರಬೇಕಾದರೆ ಸಹಕಾರಿ ಹೋರಾಟವನ್ನು ಮುಂದುವರಿಸಿಕೊಂಡು ಹೋಗಬೇಕು. ಅದಕ್ಕೆ […]