ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘ ಜೂ.26: ನೂತನ ಕಟ್ಟಡ ‘ಕದಿರು’ ಉದ್ಘಾಟನೆ
ಸಿದ್ದಾಪುರ: ಶತಮಾನೋತ್ಸವ ಸಂಭ್ರಮಾಚರಣೆಯ ಸಮೀಪದಲ್ಲಿರುವ ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘವು ಸ್ವಂತ ಬಂಡವಾಳದಿಂದ ಸುಮಾರು 2 ಕೋ. ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಕಟ್ಟಡ ಕದಿರು ಜೂ.26ರ ಬುಧವಾರ ಬೆಳಗ್ಗೆ 10.30ಕ್ಕೆ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಎ. ಜಯರಾಮ ಭಂಡಾರಿ ಅವರು ಹೇಳಿದರು. ಅವರು ಸಿದ್ದಾಪುರದಲ್ಲಿರುವ ಸಂಘದ ಕೇಂದ್ರ ಕಚೇರಿಯಲ್ಲಿ ನೂತನ ಕಟ್ಟಡ ಉದ್ಘಾಟನ ಕಾರ್ಯಕ್ರಮದ ಅಂಗವಾಗಿ ಜೂ.23ರಂದು ನಡೆಸಿದಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. 26ರಂದು ಬೆಳಿಗ್ಗೆ 10.30 ಕ್ಕೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. […]
ರಾಜೇಂದ್ರ ಕುಮಾರ್ ಸಹಕಾರಿ ಬಳಗಕ್ಕೆ ದ.ಕ. ಜಿಲ್ಲಾ ಸಹಕಾರಿ ಯೂನಿಯನ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಸಂಸ್ಥೆಗೆ ಮುಂದಿನ 5 ವರ್ಷಗಳ ಅವಧಿಗೆ ನಡೆದ ಆಡಳಿತ ಮಂಡಳಿಯ 13 ಸ್ಥಾನಗಳ ಚುನಾವಣೆಯಲ್ಲಿ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಸಹಕಾರಿ ಬಳಗದ 6 ಮಂದಿ ಅವಿರೋಧವಾಗಿ ಸೇರಿ 8 ಪ್ರತಿನಿಧಿಗಳು ಆಯ್ಕೆಯಾಗಿದ್ದಾರೆ. ಮಂಗಳೂರು ತಾಲೂಕಿನ ಪ್ರಾ.ಕೃ. ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ನೀಲಯ ಎಂ. ಅಗರಿ, ಜಿಲ್ಲೆಯ ಮಾರಾಟ ಸಹಕಾರಿ ಸಂಘಗಳ, ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಹಕಾರಿ […]
ಎಂ.ಎನ್. ರಾಜೇಂದ್ರ ಕುಮಾರ್‌ಗೆ ‘ಗ್ಲೋಬಲ್ ಲೀಡರ್‌ಶಿಪ್’ ಪ್ರಶಸ್ತಿ ಮಲೇಷಿಯಾದ ಕೌಲಾಲಂಪುರದಲ್ಲಿ ಪ್ರಶಸ್ತಿ ಪ್ರದಾನ
ಮಂಗಳೂರು: ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಹಕಾರಿ ರಂಗದಲ್ಲಿ ಮಾಡಿರುವ ಅಪ್ರತಿಮ ಸಾಧನೆಯನ್ನು ಗುರುತಿಸಿ ಅವರಿಗೆ ನವದೆಹಲಿಯ ಇನ್‌ಸ್ಟಿಟ್ಯೂಟ್ ಆಫ್ ಎಕನಾಮಿಕ್ಸ್ ಸ್ಟಡೀಸ್ ಸಂಸ್ಥೆ ಔಟ್ಸ್ಟಾಂಡಿಂಗ್ ‘ಗ್ಲೋಬಲ್ ಲೀಡರ್ಶಿಪ್ ಅವಾರ್ಡ್’ ನೀಡಿ ಗೌರವಿಸಿದೆ. ಮಲೇಷಿಯಾದ ಕೌಲಾಲಂಪುರದಲ್ಲಿ ನಡೆದ ಇಂಡೋ-ಮಲೇಷಿಯಾ ಎಕನಾಮಿಕ್ಸ್ ಕೋ-ಆಪರೇಷನ್ ಸೆಮಿನಾರ್‍ನಲ್ಲಿ ಮಲೇಷಿಯಾ ಪ್ರವಾಸೋದ್ಯಮ, ಕಲೆ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಮುಹಮ್ಮದ್ ಭಕ್ತಾರ್ ಬಿನ್ ವಾನ್ ಚಿಕ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಮಲೇಷಿಯಾ ವಾಣಿಜ್ಯೋದ್ಯಮ ಅಭಿವೃದ್ಧಿ ಸಚಿವರಾದ ದಾತೋ ಸೆರಿ ಮೊಹಮ್ಮದ್ ರೆಜುವಾನ್ […]