ಶುಲ್ಕ ಪಾವತಿಸದ ಮೊಬೈಲ್ ಟವರ್ ಗಳ ಮೇಲೆ ದಂಡ ಪ್ರಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ರಾಜ್ಯದಾದ್ಯಂತ ಅಕ್ರಮವಾಗಿ ಮೊಬೈಲ್ ಟವರ್‌ಗಳನ್ನು ಸ್ಥಾಪಿಸಿರುವ ಸಂಸ್ಥೆಗಳಿಗೆ ದಂಡ ವಿಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಕ್ರಮವಾಗಿ ಟವರ್‌ಗಳನ್ನು ಅಳವಡಿಸಿರುವ ಟೆಲಿಕಾಂ ಸೇವಾ ಪೂರೈಕೆದಾರರಿಗೆ ರಾಜ್ಯ ಸರ್ಕಾರ ದಂಡ ವಿಧಿಸಬೇಕು. ಆ ಮೂಲಕ ರಾಜ್ಯವು 7,000 ಕೋಟಿ ರೂ. ಗಳನ್ನು ಸಂಗ್ರಹಿಸಬಹುದು ಎಂದು ಕಾಂಗ್ರೆಸ್ ಮಾಜಿ ಶಾಸಕ ರಮೇಶ್ ಬಾಬು ಅವರು ಪತ್ರ ಬರೆದ ನಂತರ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಈ ನಿರ್ದೇಶನ ನೀಡಿದ್ದಾರೆ. ಕರ್ನಾಟಕ ಇನ್‌ಸ್ಟಾಲೇಶನ್ ಆಫ್ ನ್ಯೂ ಟೆಲಿಕಮ್ಯುನಿಕೇಷನ್ ಇನ್ಫ್ರಾಸ್ಟ್ರಕ್ಚರ್ ಟವರ್ಸ್ ನಿಯಮಾವಳಿ […]