ಮೊಬೈಲ್ ಟವರ್ ಕೆಳಗಡೆ ತರಕಾರಿ ಗಿಡ ನೆಟ್ಟು ಪ್ರತಿಭಟನೆ, 8 ತಿಂಗಳಿಂದ ನೆಟ್ವರ್ಕ್ ವ್ಯತ್ಯಯ
ಮಂಗಳೂರು: ಮೊಬೈಲ್ ನೆಟ್ವರ್ಕ್ ವ್ಯತ್ಯಯ ಆಗುತ್ತಿರುವುದರಿಂದ ಬೇಸತ್ತ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ ಗ್ರಾಮದ ಗ್ರಾಮಸ್ಥರು ಮೊಬೈಲ್ ಟವರ್ ಬಳಿ ತರಕಾರಿ ಗಿಡಗಳನ್ನು ನೆಡುವ ಮೂಲಕ ವಿನೂತನ ಶೈಲಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದ್ದಾರೆ. ಹರಿಹರ ಪಳ್ಳತ್ತಡ್ಕ ಗ್ರಾಮದಲ್ಲಿ ಕಾರ್ಯಾಚರಿಸುತ್ತಿರುವ ಬಿಎಸ್‍ಎನ್‍ಎಲ್ ಮೊಬೈಲ್ ಟವರ್ ಕಳೆದ ಎಂಟು ತಿಂಗಳಿಂದ ಸರಿಯಾಗಿ ಕಾರ್ಯಾಚರಿಸುತ್ತಿರಲಿಲ್ಲ. ಇದರಿಂದ ಹರಿಹರ, ಬಾಳುಗೋಡು, ಐನಕಿದು, ಕಲ್ಲೇಮಠ, ಕಲ್ಲೇರಿಕಟ್ಟ, ಮಿತ್ತಮಜಲು, ಕಿರಿಭಾಗ ಮೊದಲಾದ ಭಾಗದ ಜನತೆ ತೊಂದರೆ ಅನುಭವಿಸುತ್ತಿದ್ದರು. ಟವರು ಸಿಗ್ನಲ್ ಸಮಸ್ಯೆ […]