ಕೋಟ ಶ್ರೀನಿವಾಸ ಪೂಜಾರಿ ಅವರ ಯೋಜನೆ, ಅಭಿವೃದ್ಧಿ ಕಾರ್ಯ ರಾಜ್ಯಕ್ಕೇ ಮಾದರಿ: ಶಾಸಕ ರಘುಪತಿ ಭಟ್

ಉಡುಪಿ: ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಗ್ರಾಮ ಪಂಚಾಯತ್ ನ ಸದಸ್ಯರಿಗೆ ಪ್ರಥಮ ಬಾರಿಗೆ ಗೌರವ ಧನವನ್ನು ಮಂಜೂರು ಮಾಡಿಸಿದ್ದು ನಮ್ಮ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ನವರ ಅವಧಿಯಲ್ಲಿ ರೂ.250 ಗೌರವ ಧನವನ್ನು ಮಂಜೂರು ಮಾಡಿಸಲು ಶ್ರಮ ಪಟ್ಟಿದ್ದಲ್ಲದೇ ಗೌರವ ಧನ ಹೆಚ್ಚಳಕ್ಕೆ ನಿರಂತರವಾಗಿ ಹೋರಾಟ ಮಾಡಿ ಈಗ ರೂ.1,000ಕ್ಕೆ ಗೌರವ ಧನವನ್ನು ಹೆಚ್ಚಿಸಿದ್ದು ಮಾತ್ರವಲ್ಲದೆ ವಿಧಾನ ಪರಿಷತ್ ನಲ್ಲಿ ಸಭಾ ನಾಯಕರಾಗಿ ರೂ.1,000 ಇದ್ದ ಗೌರವ ಧನವನ್ನು […]