ಕೊರೋನಾದಿಂದ ತಪ್ಪಿಸಿಕೊಳ್ಳಲು ಲಾಕ್‌ಡೌನ್ ಅನಿವಾರ್ಯವಾಗಿತ್ತು ದಯವಿಟ್ಟು ಸಹಕರಿಸಿ : ಪ್ರಧಾನಿ ಮೋದಿ

ನವದೆಹಲಿ: ದೇಶದಲ್ಲಿ ವ್ಯಾಪಕವಾಗುತ್ತಿರುವ ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಲಾಕ್‌ಡೌನ್‌ ಅನಿವಾರ್ಯ. ಲಾಕ್‌ಡೌನ್ ನಿರ್ಧಾರ ಬಿಟ್ಟು ಬೇರೆ ದಾರಿ ಇರಲಿಲ್ಲ, ಇದರಿಂದ ತುಂಬಾ ಜನರಿಗೆ ತೊಂಧರೆಯಾಗಿದೆ. ಅದಕ್ಕೆ ಕ್ಷಮೆ ಇರಲಿ ಎಂದು ಪ್ರಧಾನಿ ಮೋದಿ ದೇಶದ ಜನರಲ್ಲಿ ಮನವಿ ಮಾಡಿಕೊಂಡರು. ಭಾನುವಾರ ಬೆಳಗ್ಗೆ ತಮ್ಮ ಜನಪ್ರಿಯ ಕಾರ್ಯಕ್ರಮ ‘ಮನ್‌ ಕೀ ಬಾತ್‌’ನಲ್ಲಿ ಮಾತನಾಡಿದರು. ಇದೇ ಕೋವಿಡ್‌-19 ಪ್ರಕರಣಗಳ ಪರೀಕ್ಷೆ ನಡೆಸುತ್ತಿರುವ ವೈದ್ಯರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ‘ರೋಗಿಗಳನ್ನು ಗುಣಪಡಿಸಲು ಶ್ರಮಿಸುತ್ತಿರುವ ವೈದ್ಯರು ಸದಾ ಎಚ್ಚರಿಕೆಯಿಂದ ಇರಬೇಕು ಎಂದರು. […]