ಎರಡು ಬಸ್​ಗಳ ನಡುವೆ ಭೀಕರ ಅಪಘಾತ: 12 ಪ್ರಯಾಣಿಕರ ಸಾವು, ಹಲವರಿಗೆ ಗಂಭೀರ ಗಾಯ, ಪ್ರಧಾನಿಯಿಂದ ಪರಿಹಾರ ಘೋಷಿಣೆ

ಗಂಜಾಂ​ (ಒಡಿಶಾ): ಒಡಿಶಾದ ಗಂಜಾಂನಲ್ಲಿ ಭಾನುವಾರ ತಡರಾತ್ರಿ ಒಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 10 ಜನ ಪ್ರಯಾಣಿಕರು ಸಾವನ್ನಪ್ಪಿದ್ದರು. 6 ಜನ ಗಂಭೀರವಾಗಿ ಗಾಯಗೊಂಡಿದ್ದರು. ಅದರಲ್ಲಿ ಮತ್ತೆ ಇಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಗಂಜಾಂ ಜಿಲ್ಲೆಯ ದಿಗ್ಪಹಂಡಿಯ ಡೆಂಗೋಸ್ಟಾ ಪ್ರದೇಶದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಬಸ್​ಗಳ ನಡುವೆ ಅಪಘಾತ ಸಂಭವಿಸಿ 12 ಜನ ಸಾವನ್ನಪ್ಪಿರುವ ಘಟನೆ ಒಡಿಶಾ ರಾಜ್ಯದ ಗಂಜಾಮ್​ನಲ್ಲಿ ನಡದಿದೆ. ಮೃತರನ್ನು […]