ಭಾರತದಲ್ಲಿ ಶೀಘ್ರವೇ ಕೊರೊನಾ ಲಸಿಕೆ ಉತ್ಪಾದನೆ: ಮೂರು ಔಷಧಿ ಪ್ರಾಯೋಗಿಕ ಹಂತದಲ್ಲಿದೆ: ಪ್ರಧಾನಿ ಮೋದಿ
ನವದೆಹಲಿ: ಭಾರತದಲ್ಲಿ ಶೀಘ್ರವೇ ಕೊರೊನಾ ಲಸಿಕೆ ಕಂಡುಹಿಡಿಯುವುದರ ಜತೆಗೆ ಭಾರೀ ಪ್ರಮಾಣದಲ್ಲಿ ಔಷಧಿ ಉತ್ಪಾದನೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ದೆಹಲಿಯ ಕೆಂಪು ಕೋಟೆಯಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ದೇಶವನ್ನು ಉದ್ದೇಶಿಸಿ ಮಾತನಾಡಿದರು. ದೇಶದ ವಿಜ್ಞಾನಿಗಳು ಕೊರೊನಾ ಲಸಿಕೆಯ ಸಂಶೋಧನೆಯಲ್ಲಿ ನಿರತರಾಗಿದ್ದಾರೆ. ಭಾರತದಲ್ಲಿ ಮೂರು ಕೊರೊನಾ ಔಷಧಿ ಪ್ರಾಯೋಗಿಕ ಹಂತದಲ್ಲಿದೆ. ಆದಷ್ಟು ಬೇಗ ಜನರಿಗೆ ಔಷಧಿ ತಲುಪಿಸಲು ಪ್ರಯತ್ನ ಮಾಡಲಾಗುವುದು ಎಂದರು. ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರಕ್ಕೆ ಅಡಿಗಲ್ಲು ಹಾಕಲಾಗಿದೆ. ಅಭಿವೃದ್ಧಿ […]