200 ವರ್ಷಗಳ ಇತಿಹಾಸದ ಮೊಳಹಳ್ಳಿ ಕಂಬಳಕ್ಕೆ ಕ್ಷಣಗಣನೆ: ಡಿ. 12 ರಂದು ಕಂಬಳ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ
ಮೊಳಹಳ್ಳಿ: ಐತಿಹಾಸಿಕ ಪುರಾಣ ಪ್ರಸಿದ್ಧ ಮೊಳಹಳ್ಳಿ ಕಂಬಳ ಮಹೋತ್ಸವಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಸುಮಾರು 200 ವರ್ಷಗಳಕ್ಕಿಂತಲೂ ಹಳೆಯ ಇತಿಹಾಸ ಹೊಂದಿರುವ ಕಂಬಳ ಮಹೋತ್ಸವ ಈ ಬಾರಿ ವಿಜೃಂಭಣೆಯಿಂದ ನಡೆಯಲು ಸಜ್ಜಾಗಿದೆ. ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಳಹಳ್ಳಿ ಕಂಬಳ ಡಿ. 12 ರಂದು ಸೋಮವಾರ ಮಧ್ಯಾಹ್ನದಿಂದ ಪ್ರಾರಂಭವಾಗಲಿದೆ. ಕುಂದಾಪುರ ತಾಲೂಕಿನ ಬಹುದೊಡ್ಡ ಗ್ರಾಮಗಳಲ್ಲಿ ಮೊಳಹಳ್ಳಿ ಎಂಬ ಊರು ಹೆಸರುವಾಸಿ. ಅಲ್ಲದೆ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಿಂತನೆಯುಳ್ಳ ಗ್ರಾಮವಾಗಿ ಬೆಳೆದಿದೆ. ಮೊಳಹಳ್ಳಿ ಗ್ರಾಮ ‘ಸುವರ್ಣ ಗ್ರಾಮ’ […]