ಮಂಗನಕಾಯಿಲೆ: ಉಡುಪಿಯಲ್ಲಿ ಒಂದು ಪ್ರಕರಣ ಪತ್ತೆ
ಉಡುಪಿ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ಪ್ರಕರಣಗಳು ಹೆಚ್ಚಾಗುತ್ತಿದ್ದು, ಶುಕ್ರವಾರ ಶಿವಮೊಗ್ಗದಲ್ಲಿ 1, ಚಿಕ್ಕಮಗಳೂರು 4, ಉಡುಪಿಯಲ್ಲಿ 1 ಪಾಸಿಟಿವ್ ಪ್ರಕರಣ ಕಂಡು ಬಂದಿದೆ. ಉಡುಪಿಯಲ್ಲಿ ಈ ವರ್ಷದ ಮೊದಲ ಪ್ರಕರಣ ಇದಾಗಿದೆ. ಈವರೆಗೆ 117 ಮಂದಿಗೆ ಪಾಸಿಟಿವ್ ಬಂದಿದ್ದು, 82 ಮಂದಿ ಗುಣಮುಖರಾಗಿ ಮೂವರು ಮೃತ ಪಟ್ಟಿದ್ದಾರೆ. 19 ಸಕ್ರಿಯ ಪ್ರಕರಣಗಳಿವೆ. ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 58 ವರ್ಷದ ಮಹಿಳೆಗೆ ಮಂಗನ ಕಾಯಿಲೆ ದೃಢಪಟ್ಟಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕು ಹೇಗೆ […]