ಮಂಕಿಪಾಕ್ಸ್ ಪ್ರಕರಣದಲ್ಲಿ ಏರಿಕೆ: ಜಾಗತಿಕ ತುರ್ತುಸ್ಥಿತಿ ಘೋಷಿಸಿದ ವಿಶ್ವ ಆರೋಗ್ಯ ಸಂಸ್ಥೆ; ಭಾರತದಲ್ಲಿ ಒಟ್ಟು ನಾಲ್ಕು ಪ್ರಕರಣ ದೃಢ

ಜಿನಿವಾ: ವಿಶ್ವ ಆರೋಗ್ಯ ಸಂಸ್ಥೆಯು ಮಂಕಿಪಾಕ್ಸ್ ಅನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿದೆ. ವೈರಸ್ ಕುರಿತು ಡಬ್ಲ್ಯೂ.ಎಚ್.ಒ ನ ತುರ್ತು ಸಮಿತಿಯ ಎರಡನೇ ಸಭೆಯ ಕೊನೆಯಲ್ಲಿ ಈ ಘೋಷಣೆ ಬಂದಿದೆ. ವರ್ಗೀಕರಣವು ವಿಶ್ವ ಆರೋಗ್ಯ ಸಂಸ್ಥೆಯು ನೀಡಬಹುದಾದ ಅತ್ಯುನ್ನತ ಎಚ್ಚರಿಕೆಯಾಗಿದೆ. ವಿಶ್ವಾದ್ಯಂತ ಮಂಕಿಪಾಕ್ಸ್ ಪ್ರಕರಣಗಳಲ್ಲಿ ಏರಿಕೆಯನ್ನು ಅನುಸರಿಸಿ ಈ ಎಚ್ಚರಿಕೆಯನ್ನು ನೀಡಲಾಗಿದೆ. 75 ದೇಶಗಳಿಂದ ಈಗ 16,000 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ, ಏಕಾಏಕಿ ಏರಿಕೆಯ ಪರಿಣಾಮವಾಗಿ ಇದುವರೆಗೆ ಐದು ಸಾವುಗಳು ಸಂಭವಿಸಿವೆ ಎಂದು ಸಂಸ್ಥೆಯ […]

ಯುರೋಪ್ ಅಮೇರಿಕಾಗಳಲ್ಲಿ ಹೆಚ್ಚುತ್ತಿರುವ ಮಂಕಿ ಪಾಕ್ಸ್ ಪ್ರಕರಣ: ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿ ಎಂದ ಕೇಂದ್ರ ಸರ್ಕಾರ

ಹೊಸದಿಲ್ಲಿ: ಬೆಲ್ಜಿಯಂ, ಫ್ರಾನ್ಸ್, ಜರ್ಮನಿ, ಇಟಲಿ, ನೆದರ್‌ಲ್ಯಾಂಡ್ಸ್, ಪೋರ್ಚುಗಲ್, ಸ್ಪೇನ್, ಸ್ವೀಡನ್, ಯುನೈಟೆಡ್ ಸ್ಟೇಟ್ಸ್, ಕೆನಡಾ, ಆಸ್ಟ್ರೇಲಿಯಾ ಮತ್ತು ಯುನೈಟೆಡ್ ಕಿಂಗ್‌ಡಮ್ ಸೇರಿದಂತೆ ಹಲವಾರು ದೇಶಗಳಲ್ಲಿ ಮಂಗನ ಸಿಡುಬು ಕಾಯಿಲೆಯ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದೆ. ಕೋವಿಡ್-19 ರ ಸಂಕಟ ಇನ್ನೂ ಮುಗಿದಿಲ್ಲದಿರುವ ಈ ವೇಳೆಯಲ್ಲಿ ಜಗತ್ತು ಮತ್ತೊಂದು ಸಾಂಕ್ರಾಮಿಕಕ್ಕೆ ಬಲಿಯಾಗುತ್ತಿದೆಯೆ ಎನ್ನುವ ಅನುಮಾನ ಹಲವರನ್ನು ಕಾಡುತ್ತಿದೆ. ಈ ಮಧ್ಯೆ ಈ ಪ್ರಕರಣಗಳನ್ನು ಸೂಕ್ಷ್ಮವಾಗಿ ಗಮನಿಸಿ, ಮಂಕಿಪಾಕ್ಸ್ ಪೀಡಿತ ದೇಶಗಳಿಗೆ ಪ್ರಯಾಣದ ಇತಿಹಾಸ ಹೊಂದಿರುವ ಯಾವುದೇ ಅಸ್ವಸ್ಥ ಪ್ರಯಾಣಿಕರನ್ನು […]