ಮುಂಗಾಳು ಮಳೆ ವಿಳಂಬ; ಮೋಡ ಬಿತ್ತನೆಗೆ ಚಿಂತನೆ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ
ಧಾರವಾಡ: ರಾಜ್ಯದಲ್ಲಿ ಮುಂಗಾರು ಮಳೆ ವಿಳಂಬವಾಗುತ್ತಿದ್ದು, ಕಳೆದ ನಾಲ್ಕೈದು ದಿನಗಳ ಹಿಂದೆಯೇ ರಾಜ್ಯಕ್ಕೆ ಮುಂಗಾರು ಮಾರುತಗಳು ಆಗಮಿಸಿದ್ದರೂ ಮಳೆ ಸುರಿಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನಗಳಲ್ಲಿ ಮಳೆಯಾಗದಿದ್ದರೆ ಮೋಡ ಬಿತ್ತನೆ ಮಾಡಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ತಲೆದೋರುತ್ತದೆ ಎನ್ನುವ ನಂಬಿಕೆ ಇದ್ದು, ಜನಸಾಮಾನ್ಯರು ಅದಾಗಲೇ ಈ ಬಗ್ಗೆ ಮಾತಾಡಿಕೊಳ್ಳುತ್ತಿದ್ದಾರೆ. ಮುಂಗಾರು ಮಳೆ ಬಂದು ಕೃಷಿ ಚಟುವಟಿಕೆಗಳು ಗರಿಗೆದರ ಬೇಕಾಗಿದ್ದ ಈ ಹೊತ್ತಿನಲ್ಲಿ ರಣಬಿಸಿಲು […]