ಮೂಡುಬೆಳ್ಳೆ: ನೂರಕ್ಕೂ ಅಧಿಕ ಮಂದಿಗೆ ಕೊರೊನಾ; ಸ್ಪಷ್ಟನೆ ನೀಡಿದ ಗ್ರಾಪಂ
ಉಡುಪಿ: ಮೂಡುಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ 100ಕ್ಕೂ ಅಧಿಕ ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂಬ ವಿಚಾರ ಸಂಪೂರ್ಣ ಸುಳ್ಳು. ಇಂತಹ ಘಟನೆ ಮೂಡುಬೆಳ್ಳೆ ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿಲ್ಲ ಎಂದು ಪಂಚಾಯತ್ ಸ್ಪಷ್ಟಪಡಿಸಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಗ್ರಾಪಂ ಅಧ್ಯಕ್ಷ ಸುಧಾಕರ ಪೂಜಾರಿ, ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಮೂಡುಬೆಳ್ಳೆಯಲ್ಲಿ 100ಕ್ಕೂ ಹೆಚ್ಚು ಮಂದಿಗೆ ಸೋಂಕು ದೃಢಪಟ್ಟಿದೆ ಎಂಬ ಸುದ್ದಿ ಬಿತ್ತರಿಸಿದ್ದಾರೆ. ಇದು ಸಂಪೂರ್ಣ ಸುಳ್ಳು ಎಂದು ಪೆರ್ಣಂಕಿಲ ಪ್ರಾಥಮಿಕ […]