ಮೂಡುಬಿದಿರೆ: ಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ-ಆಳ್ವಾಸ್ಗೆ 19ನೇ ಬಾರಿಗೆ ಅವಳಿ ಪ್ರಶಸ್ತಿ
![](https://udupixpress.com/wp-content/uploads/2024/11/1000043093.jpg)
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮಂಗಳೂರು ಹಾಗೂ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಸುಳ್ಯ ಇವರ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಸುಳ್ಯ ತಾಲೂಕನ್ನು ಪ್ರತಿನಿಧಿಸಿದ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ತಂಡವನ್ನು 35-20, 35-5 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಸುಳ್ಯ ತಾಲೂಕನ್ನು ಪ್ರತಿನಿಧಿಸಿದ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು […]