ಆಳ್ವಾಸ್ ದೂರ ಶಿಕ್ಷಣ ಕಲಿಕಾರ್ಥಿ ಸಹಾಯ ಕೇಂದ್ರ:ಶೈಕ್ಷಣಿಕ ಪ್ರವೇಶಾತಿಗೆ ಅರ್ಜಿ ಆಹ್ವಾನ
ವಿದ್ಯಾಗಿರಿ: ಆಳ್ವಾಸ್ ಪದವಿ ಕಾಲೇಜಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರವರ್ತಿತ ‘ಆಳ್ವಾಸ್ ದೂರ ಶಿಕ್ಷಣ ಕಲಿಕಾರ್ಥಿ ಸಹಾಯ ಕೇಂದ್ರ’ವು 2024 – 2025 ರ ಜುಲೈ ಆವೃತ್ತಿಯ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ. ಈ ಕೇಂದ್ರದ ಮೂಲಕ ವಿದ್ಯಾರ್ಥಿಗಳು ಸ್ನಾತಕ(ಯುಜಿ)ದ ಬಿ.ಎ, ಬಿ.ಕಾಂ, ಬಿ.ಲಿಬ್.ಐ.ಎಸ್.ಸಿ, ಬಿ.ಬಿ.ಎ, ಬಿ.ಎಸ್.ಡಬ್ಲ್ಯೂ, ಬಿ.ಎಸ್ಸಿ (ಸಂಯೋಜನೆಗಳು), ಬಿ.ಎಸ್‌ಸಿಹೋಮ್ – ಇನ್ಫಾರ್ಮೇಷನ್ ಟೆಕ್ನಾಲಜಿ, ಬಿ.ಸಿ.ಎ ಬ್ಯಾಚುರಲ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ ಪದವಿಗಳನ್ನು ಪಡೆಯಬಹುದಾಗಿದೆ. ಸ್ನಾತಕೋತ್ತರ (ಪಿಜಿ)ದಲ್ಲಿ ಎಂ.ಎ- ಶಿಕ್ಷಣ, ಕನ್ನಡ,ಇಂಗ್ಲಿಷ್, ಹಿಂದಿ, […]