ಮೂಡುಬಿದಿರೆ: ವಿದ್ಯಾರ್ಥಿಗಳು ಸಾಂಪ್ರದಾಯಿಕ ವೃತ್ತಿ ಮಾರ್ಗಗಳನ್ನು ಮೀರಿ ಲಾಜಿಸ್ಟಿಕ್ಸ್ ನಂತಹ ಉದಯೋನ್ಮುಖ ವಲಯಗಳನ್ನು ಅನ್ವೇಷಿಸಿ: ಕಾರ್ತಿಕ್ ಶೆಟ್ಟಿ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ (ಸ್ವಾಯತ್ತ) ನಿರ್ವಹಣಾಶಾಸ್ತ್ರ ವಿಭಾಗದ ಆಶ್ರಯದಲ್ಲಿ ಬುಧವಾರ ವಿದ್ಯಾಗಿರಿ ಆವರಣದಲ್ಲಿ ‘ಸ್ಪೆಕ್ಟಾಕಲ್’ ವೇದಿಕೆಯ ಚಟುವಟಿಕೆಗಳ ಉದ್ಘಾಟನಾ ಕಾರ‍್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರಿನ ಗಣೇಶ್ ಶಿಪ್ಪಿಂಗ್ ಏಜೆನ್ಸಿಯ ಸಿಇಒ ಕಾರ್ತಿಕ್ ಶೆಟ್ಟಿ, “ಲಾಜಿಸ್ಟಿಕ್ಸ್ ಮತ್ತು ಶಿಪ್ಪಿಂಗ್ ವಲಯವು ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಆಕರವಾಗಿ ಕರ‍್ಯನಿರ್ವಹಿಸುತ್ತಿದ್ದು, ಆದರೆ ಈ ಕ್ಷೇತದಲ್ಲಿರುವ ಅವಕಾಶಗಳನ್ನು ಅನ್ವೇಷಿಸಲು ನಾವು ಸೋತಿದ್ದೇವೆ ಎಂದರು. ನವಮಂಗಳೂರು ಬಂದರಿನ ಜೆಎಸ್‌ಡಬ್ಲ್ಯೂ ಕಂಟೇನರ್ ಟರ್ಮಿನಲ್‌ನೊಂದಿಗೆ ಅವರ ಅನುಭವವನ್ನು ಹಂಚಿಕೊ೦ಡ ಅವರು “ಸ್ಥಳೀಯ ಕೌಶಲ್ಯವಂತ ಪ್ರತಿಭೆಗಳ […]