ಕಡಂದಲೆಯಲ್ಲಿ ವಿದ್ಯುತ್ ಕೇಂದ್ರ ಸ್ಥಾಪನೆಗೆ 2229 ಮರಗಳ ತೆರವು: ಅಹವಾಲು ಸಭೆ
ಉಡುಪಿ: ಮೂಡಬಿದ್ರೆ ತಾಲೂಕು ಕಡಂದಲೆ ಗ್ರಾಮದ ಸ.ನಂ. 308/ಪಿ1 ರಲ್ಲಿ ವಿದ್ಯುತ್ ಕೇಂದ್ರದ ಸ್ಥಾಪನೆಗಾಗಿ ಕಾಯ್ದಿರಿಸಿದ ಸ್ಥಳದಲ್ಲಿನ ಒಟ್ಟು 2229 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಫೆಬ್ರವರಿ 20 ರಂದು ಬೆಳಗ್ಗೆ 11 ಗಂಟೆಗೆ ಮೂಡಬಿದ್ರೆ ವಲಯ ಅರಣ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ ಲಿಖಿತ ರೂಪದಲ್ಲಿ ಅಥವಾ […]
ಐತಿಹಾಸಿಕ ವಿಶ್ವ ಜಾಂಬೂರಿಗೆ ವಿದ್ಯುಕ್ತ ಚಾಲನೆ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಮೂಡುಬಿದಿರೆ: ಪ್ರಪಂಚದಾದ್ಯಂತ ಸುಮಾರು 70 ಮಿಲಿಯನ್ ಸ್ವಯಂಸೇವಕರನ್ನು ಹೊಂದಿರುವ ಸ್ಕೌಟ್ಸ್ ಗೈಡ್ಸ್‌ನ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ವಿದ್ಯಾಕಾಶಿ ಎನಿಸಿಕೊಂಡ ಮೂಡಬಿದರೆಯ ಆಳ್ವಾಸ್ ಕಾಲೇಜಿನಲ್ಲಿ ಬುಧವಾರದಂದು ವಿದ್ಯುಕ್ತ ಚಾಲನೆ ನೀಡಲಾಯಿತು. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ 150 ಎಕರೆ ವಿಶಾಲ ಪ್ರದೇಶದಲ್ಲಿ ವಿಶ್ವ ಜಾಂಬೂರಿಯನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ದೈಹಿಕ, ಮಾನಸಿಕ, ಬೌದ್ಧಿಕ, ಸಾಮಾಜಿಕ, ಸಾಂಸ್ಕೃತಿಕ ಜ್ಞಾನ ಮತ್ತು ಕೌಶಲ್ಯ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸುತ್ತದೆ. ಜವಾಬ್ದಾರಿಯುತ […]
ಶ್ರೀ ಯಕ್ಷನಿಧಿ ಮೂಡುಬಿದಿರೆ ಸಪ್ತಮ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ
ಶ್ರೀ ಯಕ್ಷನಿಧಿ ಮೂಡುಬಿದಿರೆ ಯಕ್ಷಗಾನ ಶಿಕ್ಷಣ ಸಂಸ್ಥೆ ಮತ್ತು ಮಕ್ಕಳ ಮೇಳ ಇದರ ಸಪ್ತಮ ವಾರ್ಷಿಕೋತ್ಸವ ಮತ್ತು ಶ್ರೀ ಯಕ್ಷ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭವು ನ. 06 ರವಿವಾರ ಬೆಳಿಗ್ಗೆ 8.00ರಿಂದ ರಾತ್ರಿ 12:30 ರವರೆಗೆ ಮೂಡಬಿದಿರೆ ಸಮಾಜ ಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮದ ವಿವರ: ಬೆಳಿಗ್ಗೆ 8.00 ಗಂಟೆಗೆ ಚೌಕಿಪೂಜೆ ಬೆಳಿಗ್ಗೆ 8.15 ರಿಂದ 9.30 ರವರೆಗೆ ಪೂರ್ವರಂಗ (ನಮ್ಮ ಸಂಸ್ಥೆಯಲ್ಲಿ ಹಿಮ್ಮೇಳ ಕಲಿಯುತ್ತಿರುವ ಮಕ್ಕಳಿಂದ) ಬೆಳಿಗ್ಗೆ 9.30 ರಿಂದ 10.30 ರವರೆಗೆ – ದೀಪ […]
ರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆ: ಲಿಖಿತ್.ಬಿ.ವೈ ಗೆ ಕಂಚಿನ ಪದಕ
ಉಡುಪಿ:ಹಾಸನ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಮೂಡುಬಿದ್ರೆಯ ಕ್ರೀಯೆಟಿವ್ ಎಜುಕೇಷನ್ ಫೌಂಡೇಶನ್ ನ ಶೈಕ್ಷಣಿಕ ಸಹಭಾಗಿತ್ವದ ನಗರ ಹೊರ ವಲಯದ ಹೆಚ್.ಕೆ.ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಲಿಖಿತ್.ಬಿ.ವೈ ಕಂಚಿನ ಪದಕ ಪಡೆಯುವ ಮೂಲಕ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗೆ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹೆಚ್.ಕೆ.ಸುರೇಶ್, ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಇಬ್ಬರು ಕೊಲೆ ಆರೋಪಿಗಳಿಂದ ಮಂಗಳೂರು ಪೊಲೀಸರ ಮೇಲೆ ಹಲ್ಲೆ: ಪೊಲೀಸರಿಂದ ಪ್ರತ್ಯುತ್ತರ
ಪಕ್ಷಿಕೆರೆ: ಜೂನ್ 11, ಶನಿವಾರದಂದು, ನಗರದ ಹೊರವಲಯದ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆಯಲ್ಲಿ ಇಬ್ಬರು ಕೊಲೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು. ಇದಕ್ಕೆ ಪ್ರತ್ಯುತ್ತರ ನೀಡಿದ ಪೊಲೀಸರು ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಆರೋಪಿಗಳು ಮತ್ತು ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಪೊಲೀಸರು ಮೂರು ಸುತ್ತಿನ ಗುಂಡು ಹಾರಿಸಿದ್ದು, 1 ನೇ ಸುತ್ತು ಗಾಳಿಯಲ್ಲಿ ಮತ್ತು 2 ಸುತ್ತುಗಳನ್ನು ಆರೋಪಿಗಳ ಕಾಲನ್ನು ಗುರಿಯಾಗಿಸಿಟ್ಟುಕೊಂಡು ಹಾರಿಸಲಾಗಿದೆ. 3 ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ ಎಂದು ಮಂಗಳೂರು […]