ಕೆಸಿಇಟಿ ಫಲಿತಾಂಶ: ಆಳ್ವಾಸ್ ವಿದ್ಯಾರ್ಥಿ ಅಕ್ಷಯ್ ಎಂ.ಹೆಗ್ಡೆ ರಾಜ್ಯಕ್ಕೆ ಪ್ರಥಮ ರ‍್ಯಾಂಕ್: ಕರ್ನಾಟಕ ಸಿ.ಇ.ಟಿ.-2025ರಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಅದ್ಭುತ ಸಾಧನೆ

ಮೂಡುಬಿದಿರೆ: ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-2025ರಲ್ಲಿ ಮತ್ತೊಮ್ಮೆ ಶ್ರೇಷ್ಠ ಸಾಧನೆಯನ್ನು ಮೆರೆದಿದ್ದಾರೆ. ಅಕ್ಷಯ್ ಎಂ. ಹೆಗ್ಡೆ ಕೆಸಿಇಟಿ-ಕೃಷಿ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಗಳಿಸಿ ಸಾಧನೆ ಮೆರೆದಿದ್ದಾರೆ. ಈ ಅಸಾಧಾರಣ ಸಾಧನೆಯ ಜೊತೆಗೆ ಆಳ್ವಾಸ್‌ನ ಇತರ ವಿದ್ಯಾರ್ಥಿಗಳು ಸಹ ಉನ್ನತ ರ‍್ಯಾಂಕ್‌ಗಳನ್ನು ಪಡೆದಿದ್ದು, ವರ್ಷದಿಂದ ವರ್ಷಕ್ಕೆ ಅತ್ಯುತ್ತಮ ಸಿಇಟಿ ಫಲಿತಾಂಶವನ್ನು ಮುಂದುವರಿಸಿದ್ದಾರೆ. ರಾಜ್ಯದ ಮೊದಲ 10 ರ‍್ಯಾಂಕ್‌ಗಳಲ್ಲಿ 02 ರ‍್ಯಾಂಕ್, ಮೊದಲ 50 ರ‍್ಯಾಂಕ್‌ಗಳಲ್ಲಿ 12 ರ‍್ಯಾಂಕ್, ಮೊದಲ […]