ಮೂಡುಬಿದಿರೆ: ಆಳ್ವಾಸ್‍ನಲ್ಲಿ ಹಲಸು, ಹಣ್ಣುಗಳು, ಆಹಾರೋತ್ಸವ, ಕೃಷಿ ಮಹಾಮೇಳ.

ವಿದ್ಯಾಗಿರಿ: ‘ಭಾರತೀಯ ಸಂಸ್ಕೃತಿಯ ಮೂಲವೇ ಕೃಷಿ. ಕೃಷಿಯನ್ನು ಪ್ರೋತ್ಸಾಹಿಸುವ ಮೂಲಕ ‘ಆಳ್ವಾಸ್’ ನೆಲದ ಸಂಸ್ಕೃತಿಯನ್ನು ಪೋಷಿಸುವ ಕೆಲಸ ಮಾಡುತ್ತಿದೆ’ ಎಂದು ನಿಕಟಪೂರ್ವ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ವಿದ್ಯಾಗಿರಿಯ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ವೇದಿಕೆಯಲ್ಲಿ ಕೃಷಿಋಷಿ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ನಡೆಯಲಿರುವ ಎರಡನೇ ವರ್ಷದ ‘ಸಮೃದ್ಧಿ’ – ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳದ ಉದ್ಘಾಟನಾ ಸಮಾರಂಭದಲ್ಲಿ ಶುಕ್ರವಾರ ಅವರು ಮಾತನಾಡಿದರು. […]