ಕೊಲ್ಲೂರು: ಉಸ್ತುವಾರಿ ಸಚಿವರಿಂದ ನೂತನ ಪ್ರವಾಸಿ ಮಂದಿರ ಉದ್ಘಾಟನೆ
ಉಡುಪಿ: ಕೊಲ್ಲೂರಿಗೆ ಆಗಮಿಸುವ ಪ್ರವಾಸಿಗರಿಗೆ ಅನುಕೂಲವಾಗುವಂತೆ ಲೋಕೋಪಯೋಗಿ ಇಲಾಖೆ ವತಿಯಿಂದ 1.50 ಕೋಟಿ ರೂ ವೆಚ್ಚದಲ್ಲಿನಿರ್ಮಿಸಲಾದ ನೂತನ ಪ್ರವಾಸಿ ಮಂದಿರವನ್ನು ಸೋಮವಾರದಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಿದರು. ನಂತರ ಮಾತನಾಡಿದ ಸಚಿವರು, ಕೊಲ್ಲೂರು ಶ್ರೀಮೂಕಾಂಬಿಕಾ ದೇವರ ದರ್ಶನಕ್ಕಾಗಿ ದೇಶದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು. ದೂರದೃಷ್ಟಿಯಯನ್ನಿಟ್ಟುಕೊಂಡು ಯಾವುದೇ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿದಲ್ಲಿ ಸಾರ್ವಜನಿಕರಿಗೆ ಅದರಿಂದ ಹೆಚ್ಚಿನ ಅನುಕೂಲವಾಗಲಿದೆ. […]