ಜನರ ಅನಾವಶ್ಯಕ ಓಡಾಟ ನಿಯಂತ್ರಣಕ್ಕೆ ಇನ್ನಷ್ಟು ಬಿಗಿ ಕ್ರಮ: ಸಚಿವ ಬೊಮ್ಮಾಯಿ
ಬೆಂಗಳೂರು: ಲಾಕ್ ಡೌನ್ ನಿಯಮಗಳನ್ನು ಜನರು ಸರಿಯಾಗಿ ಪಾಲಿಸುತ್ತಿಲ್ಲ. ಹೀಗಾಗಿ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿದೆ. ಜನ ಅನವಶ್ಯಕವಾಗಿ ಮನೆಯಿಂದ ಹೊರಗಡೆ ಬರುತ್ತಿದ್ದಾರೆ. ಆದ್ದರಿಂದ ವಾಹನಗಳನ್ನು ಜಪ್ತಿ ಮಾಡುವ ಕಾರ್ಯಾಚರಣೆಯನ್ನು ಮತ್ತಷ್ಟು ಕಠಿಣವಾಗಿ ಜಾರಿಗೊಳಿಸಲಾಗುವುದು ಎಂದರು.