ಗ್ರಾಪಂ ಚುನಾವಣೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ: ಕೊಡವೂರು
ಉಡುಪಿ: ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದಾರೆ. ಆ ಮೂಲಕ ಪಕ್ಷದ ಈ ಹಿಂದಿನ ಇತಿಹಾಸವನ್ನು ಮರುಕಳಿಸಲು ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ತೊಡಗಿಸಿಕೊಳ್ಳಬೇಕು ಎಂದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಕಾರ್ಯಕರ್ತರಿಗೆ ಕರೆ ನೀಡಿದರು. ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವ ತಯಾರಿಗಾಗಿ ಜಿಲ್ಲಾ ಕಾಂಗ್ರಸ್ ಭವನದಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕರೊಂದಿಗೆ ಸ್ಪಂದಿಸುವ ಕಾರ್ಯಕರ್ತರನ್ನು ನಾಯಕರನ್ನಾಗಿಸುವ ಗ್ರಾಮ ಪಂಚಾಯತ್ […]