ಚೊಚ್ಚಲ ಹೆರಿಗೆ ಬಳಿಕ ತಾಯಿ-ಮಗು ಸಾವು: ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಕುಟುಂಬಸ್ಥರ ಆರೋಪ

ಮಂಗಳೂರು: ಚೊಚ್ಚಲ ಹೆರಿಗೆ ನಂತರ ತಾಯಿ ಹಾಗೂ ಮಗು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಸಂಭವಿಸಿದೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮೃತ ಮಹಿಳೆಯನ್ನು ಬಂಟ್ವಾಳ ತಾಲೂಕಿನ ರಾಮನಗರ ನಿವಾಸಿ ಕಾಜಲ್ ಶೆಟ್ಟಿ (25) ಎಂದು ಗುರುತಿಸಲಾಗಿದೆ. ಇವರು ಚೊಚ್ಚಲ ಹೆರಿಗೆಗಾಗಿ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಬಂದಿದ್ದರು. ಆದರೆ ಹೆರಿಗೆ ಬಳಿಕ ಮಗು ಸಾವನ್ನಪ್ಪಿದ್ದು, ಕಾಜಲ್ ಅವರಿಗೆ ತೀವ್ರ ರಕ್ತಸ್ರಾವ‌ ಉಂಟಾಗಿತ್ತು. ಈ ಕಾರಣಕ್ಕಾಗಿ ಕೂಡಲೇ ಅವರನ್ನು […]