ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ಮೊಂತಿ ಫೆಸ್ತ್
ಉಡುಪಿ: ಕೊರೊನಾ ಭೀತಿಯ ನಡುವೆ ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ತ್ (ತೆನೆ ಹಬ್ಬ) ಅನ್ನು ಜಿಲ್ಲೆಯಾದ್ಯಂತ ಕ್ರೆಸ್ತ ಸಮುದಾಯದ ಜನರು ಭಕ್ತಿ ಭಾವದಿಂದ ಸರಳ ರೀತಿಯಲ್ಲಿ ಬುಧವಾರ ಆಚರಿಸಿದರು. ಕೊರೊನಾ ಹಿನ್ನಲೆಯಲ್ಲಿ ಸರಕಾರದ ಮಾರ್ಗಸೂಚಿಯಂತೆ ಸಾರ್ವಜನಿಕವಾಗಿ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿ ಮೆರವಣಿಗೆಯಲ್ಲಿ ತರುವುದನ್ನು ನೀಷೇಧಿಸಿದ್ದು ಧರ್ಮಗುರುಗಳು ಚರ್ಚಿನಲ್ಲಿಯೇ ಆಯಾ ಊರಿನ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು. ಪುಟ್ಟ ಮಕ್ಕಳು ಕನ್ಯಾ ಮರಿಯಮ್ಮನವರ ಮೂರ್ತಿಗೆ ಹೂಗಳನ್ನು ಸಮರ್ಪಿಸಿದ ಬಳಿಕ ಜಿಲ್ಲೆಯ […]