ರಕ್ತದಾನಿಗಳ ದಿನಾಚರಣೆಯಿಂದ ಹೊಸ ರಕ್ತದಾನಿಗಳಿಗೆ ಪ್ರೇರಣೆ: ಡಿ.ಹೆಚ್.ಓ ಡಾ. ನಾಗಭೂಷಣ ಉಡುಪ
ಉಡುಪಿ: ಜಿಲ್ಲೆಯಲ್ಲಿ ರಕ್ತದಾನಿಗಳ ಸಂಖ್ಯೆ ಸಾಕಷ್ಟಿದ್ದು, ತುರ್ತು ಸಂದರ್ಭಗಳಲ್ಲಿ ಇವರು ಸ್ವಯಂ ಪ್ರೇರಿತರಾಗಿ ಮುಂದೆ ಬಂದು ರಕ್ತದಾನ ಮಾಡುತ್ತಿದ್ದಾರೆ. ರಕ್ತದಾನಿಗಳ ದಿನಾಚರಣೆಯು ಹೊಸ ರಕ್ತದಾನಿಗಳಿಗೆ ಪ್ರೇರಣೆ ನೀಡಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೇಳಿದರು. ಅವರು ಉದ್ಯಾವರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದ ಭಾವಪ್ರಕಾಶ ಆಡಿಟೋರಿಯಂನಲ್ಲಿ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ […]